Advertisement

ಆಯುರ್ವೇದ ಔಷಧದಿಂದ ರೋಗ ನಿರೋಧಕ ಶಕ್ತಿ ಹೆಚ್ಚಳ

12:48 PM Jun 16, 2020 | mahesh |

ಚಿಕ್ಕಮಗಳೂರು: ಆಯುರ್ವೇದ ಔಷಧಿಯಿಂದ ಮಾನವನ ದೇಹಕ್ಕೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಬದಲಿಗೆ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸಿ ಕೆಲ ರೋಗಗಳಿಂದ ಮುಕ್ತರಾಗಲು ಸಹಕಾರಿಯಾಗಲಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.

Advertisement

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಆಯುಷ್‌ ನಿರ್ದೇಶನಾಲಯ, ಜಿಲ್ಲಾಡಳಿತ ಮತ್ತು ಜಿಪಂ, ಚಿಕ್ಕಮಗಳೂರು ಜಿಲ್ಲಾ ಆಯುಷ್‌ ಇಲಾಖೆ ಸಹಯೋಗದಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯೋಜಿಸಿದ್ದ ಆಯುಷ್‌ ಔಷಧ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೋಮಿಯೋಪತಿ ಔಷಧಗಳನ್ನು ಬಳಸುವುದರಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ, ಬದಲಿಗೆ ನಿಧಾನವಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಹಲವಾರು ರೋಗಗಳಿಂದ ನಮ್ಮನ್ನು ರಕ್ಷಿಸಲು ಸಹಕಾರಿಯಾಗಲಿದೆ
ಎಂದು ತಿಳಿಸಿದರು.

ಕೋವಿಡ್ ಸೋಂಕಿನ ಬಗ್ಗೆ ಆತಂಕ ಬೇಡ. ಆದರೆ ಎಚ್ಚರಿಕೆ ಅಗತ್ಯ. ಜಿಲ್ಲೆಯಲ್ಲಿ ಈವರೆಗೆ ಇದ್ದ ಎಲ್ಲಾ ಪಾಸಿಟಿವ್‌ ಪ್ರಕರಣಗಳಲ್ಲಿ ಗುಣಮುಖರಾಗಿದ್ದು, ಓರ್ವ ಎಸ್‌. ಎಸ್‌.ಎಲ್‌.ಸಿ ವಿದ್ಯಾರ್ಥಿಯ ಪಾಸಿಟಿವ್‌ ಪ್ರಕರಣವನ್ನು ಹೆಚ್ಚಿನ ತಪಾಸಣೆಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ದೇಶದಲ್ಲಿ ಪ್ರಾರಂಭದ ಹಂತದಲ್ಲಿ ಲಾಕ್‌ಡೌನ್‌ ಮಾಡಿದ್ದರಿಂದ ಪಾಸಿಟಿವ್‌ ಪ್ರಕರಣಗಳು ಕಡಿಮೆ ಇದೆ. ಸಾವಿನ ಸಂಖ್ಯೆ ಬೇರೆ ದೇಶಗಳಿಗಿಂತ ಹೋಲಿಸಿದ್ದಲ್ಲಿ ಸಾಕಷ್ಟು ಕಡಿಮೆ ಇದೆ ಎಂದರು. ಜಿಲ್ಲಾಡಳಿತ ಕೈಗೊಂಡ ಸುರಕ್ಷತಾ ಕ್ರಮಗಳಿಂದ ಕೊರೊನಾ ಸೋಂಕು ಪಾಸಿಟಿವ್‌ ಪ್ರಕರಣಗಳು ಕಡಿಮೆ ಇವೆ. ಸ್ವದೇಶಿ ಆಯುರ್ವೇದ ಔಷ ಧಗಳನ್ನು ಬಳಸುವುದರಿಂದಾಗಿ ದೇಹದಲ್ಲಿ ಸೋಂಕು ತಡೆಗಟ್ಟುವ ರೋಗ ನಿರೋಧಕ ಶಕ್ತಿಗಳು ಹೆಚ್ಚಾಗಿ ಸುರಕ್ಷಿತವಾಗಿರಲು ಸಹಕಾರಿಯಾಗಲಿದೆ ಎಂದರು.

ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಂಡೆ, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಎಸ್‌. ಗೀತಾ, ಮೈಸೂರು ವಿಭಾಗದ ನೋಡೆಲ್‌ ಅಧಿಕಾರಿ ಡಾ| ವಿರುಪಾಕ್ಷಪ್ಪ, ಜಿಲ್ಲೆಯ ಎಲ್ಲಾ ಆಯುಷ್‌ ವೈದ್ಯಾಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next