Advertisement

ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ

06:15 AM Jun 19, 2018 | Team Udayavani |

ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರ ಆರಂಭದಲ್ಲಿಯೇ ರಾಜ್ಯ ಸರ್ಕಾರಿ ನೌಕರರಿಗೆ ಗಿಫ್ಟ್ ನೀಡಿದ್ದು, ಶೇ. 1.75 ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 

Advertisement

6 ನೇ ವೇತನ ಆಯೋಗದ ವರದಿ ಜಾರಿಯಾದ ನಂತರ ಸರ್ಕಾರಿ ನೌಕರರಿಗೆ ನೀಡುತ್ತಿರುವ ತುಟ್ಟಿ ಭತ್ಯೆ ಇದಾಗಿದ್ದು, 2018 ಜನವರಿ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಮತ್ತು ಜಿಲ್ಲಾ ಪಂಚಾಯತಿ ಪೂರ್ಣಾವಧಿ ನೌಕರರು, ಸರ್ಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು, ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next