Advertisement

ಕೋವಿಡ್‌ ಹೆಚ್ಚಳ; ರೆಡ್‌ ಝೋನ್‌ನಲ್ಲಿ ಬೀದರ

06:34 PM Mar 11, 2021 | Team Udayavani |

ಬೀದರ: ಜಿಲ್ಲೆಯಲ್ಲಿ ಪ್ರತಿದಿನ ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ರಾಜ್ಯದಲ್ಲಿಯೇ ಬೀದರ ರೆಡ್‌ ಝೋನ್‌ದಲ್ಲಿದೆ. ಆರೋಗ್ಯದ ಹಿತದೃಷ್ಟಿಯಿಂದಾಗಿ ಸಾರ್ವಜನಿಕರು ಕಡ್ಡಾಯ ಮಾಸ್ಕ್ ಧರಿಸುವುದನ್ನು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ರೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Advertisement

ನಗರದ ಜಿಲ್ಲಾಧಿ ಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಇಲಾಖೆಯಿಂದ ನಡೆದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಬಳಿಕ ಎಲ್ಲ ತಹಶೀಲ್ದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯ ಬಗ್ಗೆ ಜಾಗೃತರಾಗಿರಬೇಕು. ಸ್ಯಾನಿಟೈಸರ್‌, ಸೋಪ್‌ ಬಳಸಿ ಕೈ ತೊಳೆದುಕೊಳ್ಳಬೇಕು. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಸಾರ್ವಜನಿಕರಲ್ಲಿ ಸಭೆಯ ಮೂಲಕ ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಈಗ ಮೊದಲಾದ್ಯತೆ ಕೊಡಬೇಕು. ಈಗ 100 ಜನರಿಗೆ ಪರೀಕ್ಷಿಸಿದರೆ ಈ ಪೈಕಿ ಇಬ್ಬರಿಗೆ ಕೋವಿಡ್‌ ಇರುವುದು ಕಂಡುಬರುತ್ತಿದೆ.
ಹೀಗಾಗಿ ಬೀದರ ಜಿಲ್ಲೆಯಲ್ಲಿ ಕೋವಿಡ್‌ ತಪಾಸಣೆ ತೀವ್ರಗೊಳಿಸಬೇಕು. ಕಮಲನಗರ, ಔರಾದ ಮತ್ತು ಭಾಲ್ಕಿಯಲ್ಲಿ ಕೋವಿಡ್‌ ಟೆಸ್ಟ್‌ ಹೆಚ್ಚಿಸಬೇಕು. ರವಿವಾರ
ಕೂಡ ಕೋವಿಡ್‌ ಟೆಸ್ಟ್‌ ನಡೆಸಬೇಕು. ತಾಲೂಕು ಆರೋಗ್ಯಾಧಿಕಾರಿಗಳು, ತಾಪಂ ಇಒ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೇರಿ ಈ
ಕಾರ್ಯ ನಡೆಸಬೇಕೆಂದು ತಿಳಿಸಿದರು.

ವಿಡಿಯೋ ಸಂವಾದದಲ್ಲಿ ಎಸ್ಪಿ ನಾಗೇಶ ಡಿ.ಎಲ್‌., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್‌ ನಿರ್ದೇಶಕರಾದ ಡಾ| ಶಿವಕುಮಾರ, ಡಿಎಸ್‌ಒ ಡಾ| ಕೃಷ್ಣಾ ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ರತಿಕಾಂತ ಸ್ವಾಮಿ,
ಡಾ| ಮಹೇಶ ತೊಂಡಾರೆ ಹಾಗೂ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next