Advertisement

ಅತಿಥಿ ಶಿಕ್ಷಕರ ಸಂಭಾವನೆ ಹೆಚ್ಚಳ

11:31 AM Jun 19, 2022 | Team Udayavani |

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರಸ್ತುತ ಇರುವ 7,500 ರೂ. ಗೌರವಧನವನ್ನು 10 ಸಾವಿರ ರೂ.ಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆ ಶಿಕ್ಷಕರಿಗೆ 8,000ರೂ. ಗೌರವ ಧನವನ್ನು 10,500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಈ ಅತಿಥಿ ಶಿಕ್ಷಕರಿಗೆ ಕಳೆದ ಆರು ವರ್ಷಗಳಿಂದ ಗೌರವ ಸಂಭಾವನೆ ಪರಿಷ್ಕರಣೆ ಮಾಡಿರಲಿಲ್ಲ. ಪ್ರಾಥಮಿಕ ಶಾಲೆಗಳಲ್ಲಿ 22,000, ಪ್ರೌಢ ಶಾಲೆಗಳಲ್ಲಿ 5,078 ಶಿಕ್ಷಕರಿಗೆ ಇದು ಅನ್ವಯವಾಗಲಿದೆ. ಇದರ ಜೊತೆಗೆ ಪ್ರಾಥಮಿಕ ಶಾಲೆಗಳಲ್ಲಿ 4,000 ಹಾಗೂ ಪ್ರೌಢಶಾಲೆಗಳಲ್ಲಿ 1,000 ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next