Advertisement

Karnataka ಆಯುಷ್‌ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲು ಪ್ರಮಾಣ ಹೆಚ್ಚಳ

08:55 PM Dec 11, 2023 | Team Udayavani |

ಬೆಳಗಾವಿ: ರಾಜ್ಯದ ಆಯುಷ್‌ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ. ಈ ರೋಗಿಗಳಿಗೆ ಎಲ್ಲ ರೀತಿಯ ಚಿಕಿತ್ಸಾ ಸೌಲಭ್ಯ ದೊರೆಯುವಂತೆ ಮಾಡಲು ಸೂಕ್ತ ಮೇಲ್ವಿಚಾರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

Advertisement

ವಿಧಾನ ಪರಿಷ‌ತ್‌ನಲ್ಲಿ ಸದಸ್ಯರಾದ ಪಿ.ಎಚ್‌.ಪೂಜಾರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿರುವ 80 ಆಸ್ಪತ್ರೆಗಳಲ್ಲಿ ಈಗಾಗಲೇ 55 ಆಯುಷ್‌ ಆಸ್ಪತ್ರೆಗಳಲ್ಲಿ ಒಳರೋಗಿಗಳ ದಾಖಲಾತಿ ಪ್ರಾರಂಭಿಸಲಾಗಿದೆ. ಉಳಿದ 25 ಆಯುಷ್‌ ಆಸ್ಪತ್ರೆಗಳ ಪೈಕಿ ಐದು ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಕ್ರಿಯೆ ನಡೆದಿದೆ ಎಂದರು. ಇನ್ನುಳಿದ 20 ಆಸ್ಪತ್ರೆಗಳಲ್ಲೂ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಜೊತೆ ಸಭೆ ನಡೆಸಲಾಗಿದೆ. ಎರಡು ತಿಂಗಳ ಅವಧಿಯಲ್ಲಿ ಈ ಆಸ್ಪತ್ರೆಗಳಲ್ಲಿ ಒಳರೋಗಿಗಳ ದಾಖಲಾತಿ ನಡೆಯಲಿದೆ ಎಂದು ಸಚಿವರು ಹೇಳಿದರು.

ಜಿಲ್ಲಾ ಆಯಷ್‌ ಅಧಿಕಾರಿಗಳ ಜೊತೆ ಪ್ರತಿ ತಿಂಗಳು ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ಆಸ್ಪತ್ರೆಗಳ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಆಯುಷ್‌ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಇರುವ ಕಡೆ ಗಮನ ನೀಡಲಾಗುವುದು. ಔಷಧಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಆಯುಷ್‌ ತಜ್ಞ ವೈದ್ಯರ ನೇಮಕಕ್ಕೆ ಒತ್ತು ಕೊಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next