Advertisement

Development ದೃಷ್ಟಿಯಿಂದ ಪೆಟ್ರೋಲ್-ಡಿಸೇಲ್ ದರ ಏರಿಕೆ: ಎಂ.ಬಿ.ಪಾಟೀಲ್

08:01 PM Jun 15, 2024 | Vishnudas Patil |

ವಿಜಯಪುರ : ಅನ್ಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್-ಡಿಸೇಲ್ ಇಂಧನ ಬೆಲೆ ಕಡಿಮೆ ಇದೆ. ಹೀಗಾಗಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇಂಧನ ಬೆಲೆ ಏರಿಕೆ ಮಾಡಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರದ ಇಂಧನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Advertisement

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆದಾಯ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಹಾಗೂ ಇತರೆ ಅಭಿವೃದ್ಧಿಗೆ ಹಣ ಬೇಕಲ್ಲವೇ. ನಾವು ಬೆಲೆ ಏರಿಕೆ ಮಾಡಿದರೂ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಗಿಂತ ನಮ್ಮ ರಾಜ್ಯದ ದರ ಕಡಿಮೆ ಇದೆ ಎಂದು ಸಮಜಾಯಿಸಿ ನೀಡಿದರು.

ಇಂಧನ ದರ ಏರಿಕೆ ಮಾಡಿದರೂ ಬಳಸುವ ಅನುದಾನ ಜನರ ಅಭಿವೃದ್ಧಿಗಾಗಿಯೇ ಅಲ್ಲವೇ. ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನೂ ಕೊಡುತ್ತಿದ್ದೇವೆ, ಅಭಿವೃದ್ಧಿಯನ್ನೂ ಮಾಡುತ್ತಿದ್ದೇವೆ, ಫೈನಾನ್ಸಿಯಲ್ ಮೊಬೈಲೇಷನ್ ಮಾಡಲೇಬೇಕು ಎಂದರು.

ತೈಲ ಬೆಲೆಯಲ್ಲಿ ಕೇಂದ್ರ ಸರ್ಕಾರ ಇಳಿಕೆ ಮಾಡಿಲ್ಲ. ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಗ್ಯಾಸ್ ಬೆಲೆ 440 ರೂ. ಹಾಗೂ ಪೆಟ್ರೋಲ್ ದರ 64 ರೂ. ಇತ್ತು. ಬಿಜೆಪಿ ಸರ್ಕಾರದಲ್ಲಿ ಗ್ಯಾಸ್ ಬೆಲೆ 1100 ರೂ., ಪೆಟ್ರೋಲ್ ದರ 105 ರೂ.ಗೆ ಏರಿಕೆಯಾಗಿದೆ. ಮೋದಿ ಆಡಳಿತದಲ್ಲಿ ಜನ ಸಾಮಾನ್ಯರ ನಿತ್ಯವ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿವೆ. ಆದರೂ ನಾವು ರಾಜ್ಯದಲ್ಲಿ ಇಂಧನ ದರವನ್ನು ಅನಗತ್ಯವಾಗಿ ಹೆಚ್ಚಳ ಮಾಡಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next