ಹೊಸದಿಲ್ಲಿ: ರಾಜ್ಯದಲ್ಲಿ ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ.65ಕ್ಕೇರಿಸುವ ಬಿಹಾರ ಸರಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನಡೆಯಾ ಗಿದೆ. ಬಿಹಾರ ಸರಕಾರದ ಈ ನಿರ್ಧಾರಕ್ಕೆ ಪಾಟ್ನಾ ಹೈಕೋರ್ಟ್ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸರಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್, ಅರ್ಜಿಯನ್ನು ಸೆಪ್ಟೆಂಬರ್‌ನಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ರಾಜ್ಯ ಸರಕಾರರ ಪರ ಹಾಜರಾಗಿದ್ದ ವಕೀಲ ಶ್ಯಾಂ ದಿವಾನ್, ಛತ್ತೀಸ್‌ಗಢದಲ್ಲಿ ಇಂತಹುದ್ದೇ ಪ್ರಕರಣ ನಡೆದಾಗ ಸುಪ್ರೀಂಕೋರ್ಟ್ ತಡೆ ನೀಡಿತ್ತು. ಹೀಗಾಗಿ ಇದಕ್ಕೂ ತಡೆ ನೀಡಬೇಕು ಎಂದು ಕೋರಿದರು. ಕಳೆದ ವರ್ಷ ನವೆಂಬರ್‌ನಲ್ಲಿ ನಿತೀಶ್ ಸರಕಾರ ರಾಜ್ಯದಲ್ಲಿ ಮೀಸ ಲಾತಿ ಮಿತಿಯನ್ನು ಶೇ.65ಕ್ಕೆ ಹೆಚ್ಚಳ ಮಾಡಿತ್ತು.
ಸರಣಿ ಸೇತುವೆ ಕುಸಿತ:ಬಿಹಾರ ಸರಕಾರಕ್ಕೆ ನೋಟಿಸ್
ಹೊಸದಿಲ್ಲಿ: ಬಿಹಾರದಲ್ಲಿ 15ಕ್ಕೂ ಅಧಿಕ ಸೇತುವೆಗಳು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ರಾಜ್ಯ ಸರಕಾರ, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ಕ್ಕೆ ನೋಟಿಸ್ ಜಾರಿ ಮಾಡಿದೆ. ಇದಲ್ಲದೆ ರಾಜ್ಯ ಸರಕಾರದ ರಸ್ತೆ ನಿರ್ಮಾಣ ವಿಭಾಗಕ್ಕೂ ನೋಟಿಸ್ ನೀಡಿದ್ದು, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿದೆ. ಬಿಹಾರದಲ್ಲಿನ ಸೇತುವೆಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಈ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಸಲಹೆ ನೀಡುವ ಬಗ್ಗೆ ಸಮಿತಿ ರಚಿಸಲು ಸೂಚನೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.