Advertisement

ಜಲಾಶಯಗಳ ನೀರಿನ ಮಟ್ಟದಲ್ಲಿ ಹೆಚ್ಚಳ

06:15 AM Jun 15, 2018 | |

ಬೆಂಗಳೂರು: ಮಲೆನಾಡು, ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಪ್ರಮುಖ ನದಿಗಳಲ್ಲಿ ನೆರೆ ಬಂದಿದ್ದು, ನದಿ ದಂಡೆಯ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

Advertisement

ಗುರುವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ದಕ್ಷಿಣ ಕನ್ನಡದ ಮಾಣಿಯಲ್ಲಿ ರಾಜ್ಯದಲ್ಲಿಯೇ ಅಧಿಕ 20 ಸೆಂ.ಮೀಗಳಷ್ಟು ಮಳೆ ಸುರಿಯಿತು.

ಕರಾವಳಿ, ಮಲೆನಾಡು ಭಾಗದಲ್ಲಿ ವರುಣದ ಆರ್ಭಟಕ್ಕೆ ಜನ ಜೀವನ ತತ್ತರಗೊಂಡಿದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಕಳೆದ ಮೂರು ದಿನದಲ್ಲಿ ಬರೋಬ್ಬರಿ 3 ಟಿಎಂಸಿ ನೀರು ಹರಿದು ಬಂದಿದೆ. ಜಲಾಶಯದ ಒಳ ಹರಿವಿನಲ್ಲೂ ಹೆಚ್ಚಳವಾಗಿದೆ. ಗುರುವಾರ ಒಂದೇ ದಿನಕ್ಕೆ 28,367 ಕ್ಯೂಸೆಕ್‌ನಷ್ಟು ನೀರು ಹರಿದು ಬರುತ್ತಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಖುಷಿ ಮೂಡಿಸಿದೆ.

ಮಹಾರಾಷ್ಟÅದ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾದ ಪರಿಣಾಮ ಹಿಡಕಲ್‌ ಜಲಾಶ ಯಕ್ಕೆ 1,155 ಕ್ಯೂಸೆಕ್‌ ನೀರು ಬರುತ್ತಿದೆ. ಜಲಾಶಯದಿಂದ 96 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.ಖಾನಾಪುರ ತಾಲೂಕಿನ ಜಾಂಬೋಟಿ ಹಾಗೂ ಕಣಕುಂಬಿ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆ ಯಾಗಿದ್ದರಿಂದ ಮಲಪ್ರಭಾ ಜಲಾಶಯಕ್ಕೆ 1527 ಕ್ಯೂಸೆಕ್‌ ನೀರು ಬರುತ್ತಿದೆ. ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈಗ 2039.55 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ
ತಾಲೂಕಿನ ಹಿಪ್ಪರಗಿ ಜಲಾಶಯದಲ್ಲಿ 1 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಕೇರಳದ ವೈನಾಡು ಪ್ರದೇಶ, ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ಕಣಿವೆಯ ಕೆಆರ್‌ಎಸ್‌, ಕಬಿನಿ ಹಾಗೂ ಹಾರಂಗಿ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದ್ದು,ಮೂರು ಜಲಾಶಯಗಳು ಮೈದುಂಬಿಕೊಳ್ಳುತ್ತಿವೆ.ಕೆಆರ್‌ಎಸ್‌ ಜಲಾಶಯಕ್ಕೆ 26 ಸಾವಿರ ಕ್ಯೂಸೆಕ್‌ ಒಳಹರಿವು ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಪ್ರಸ್ತುತ ನೀರಿನ ಮಟ್ಟ 92-30 ಅಡಿ ಇದೆ. ಜಲಾಶಯಕ್ಕೆ 26,395 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಕೇವಲ ಕುಡಿಯಲು ಬಳಕೆಗಾಗಿ 416 ಕ್ಯೂಸೆಕ್‌ ನೀರು ನದಿಗೆ ಬಿಡಲಾಗುತ್ತಿದೆ. ಒಟ್ಟು ಜಲಾಶಯದಲ್ಲಿ 17.355 ಟಿಎಂಸಿ ನೀರು ಸಂಗ್ರವಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಅತಿ ಹೆಚ್ಚು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. 

Advertisement

ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಸುಮಾರು 5,000 ಕ್ಯೂಸೆಕ್ಸ್‌ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮೈಸೂರಿನ ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರ ಸಿ.ಪಿ.ಜಗದೀಶ್‌ ತಿಳಿಸಿ¨ªಾರೆ. ಹಾರಂಗಿ ಜಲಾಶಯದ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥಯ 28.59 ಅಡಿ ಇದ್ದು, ಇದೀಗ 2,825.81 ಅಡಿ ತಲುಪಿದೆ. ಒಳಹರಿವು 2,018 ಕ್ಯೂಸೆಕ್‌ ಬರುತ್ತಿದೆ.

ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಮಳೆ
ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧೆಡೆ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆರಂಭದಲ್ಲಿ ಉತ್ತರ ಒಳನಾಡಿನಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ, ಕಳೆದ ಮೂರ್‍ನಾಲ್ಕು ದಿನಗಳಲ್ಲಿ ದಕ್ಷಿಣ ಒಳನಾಡು ಅದರಲ್ಲೂ ಮಲೆನಾಡಿಗೆ ಶಿಫ್ಟ್ ಆಗಿದೆ. ಇದರಿಂದ ಮಲೆನಾಡು ಅಕ್ಷರಶಃ ದ್ವೀಪವಾಗಿ ಮಾರ್ಪಟ್ಟಿದೆ. ಇನ್ನೂ ಎರಡು ದಿನ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಡಿಕೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ನಿರೀಕ್ಷೆ ಇದೆ. ಅದೇ ರೀತಿ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ ನಾಲ್ಕೈದು ದಿನಗಳು ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ
ಪಶ್ಚಿಮ ಘಟ್ಟದ ತಪ್ಪಲಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕುಂದಾಪುರ ತಾಲೂಕು ಕುಬಾj ನದಿಯು ತುಂಬಿ ಹರಿಯುತ್ತಿದೆ. ಗುರುವಾರ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮಿà ದುರ್ಗಾ ಪರಮೇಶ್ವರೀ ದೇವಸ್ಥಾನದ ಹೊರ ಭಾಗದ ತನಕ ನದಿಯ ನೀರು ನುಗ್ಗಿದೆ. ಮಳೆಯಿಂದಾಗಿ ಫಲ್ಗುಣಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, 
ವೇಣೂರು-ಮೂಡಬಿದಿರೆ ರಾಜ್ಯ ಹೆದ್ದಾರಿ ವೇಣೂರು ಚರ್ಚ್‌ ಬಳಿ ಮುಳುಗಡೆಯಾಗಿತ್ತು. ಇದರಿಂದಾಗಿ ಕೆಲಹೊತ್ತು ರಾಜ್ಯ ಹೆದ್ದಾರಿಯಲ್ಲಿ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ನೇತ್ರಾವತಿ ನದಿಯಲ್ಲಿ ನೆರೆ ಅಬ್ಬರ ಕಂಡು ಬಂದಿದ್ದು, ಹರಿವಿನ ಮಟ್ಟ 7 ಮೀ.ಗೆ ಏರಿಕೆಯಾಗಿದೆ. ತುಂಬೆ ಡ್ಯಾಂ ಬಾಗಿಲುಗಳನ್ನು ಸಂಪೂರ್ಣ ತೆರೆದು ನೀರನ್ನು ಹೊರಕ್ಕೆ
ಹರಿಯಬಿಡಲಾಗಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಗುರುವಾರ ಮಳೆಯಾಗಿದ್ದು, ಸಾಗರ ತಾಲೂಕಿನ ಕೂಂಜವಳ್ಳಿಯ ಬಾನುಕುಳಿ ಹಿರಿಯ ಪ್ರಾಥಮಿಕ ಶಾಲೆಯ ಕೆಲ ಭಾಗ ಕುಸಿದಿದೆ. ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಅಡಕೆ ತೋಟ, ಶುಂಠಿ, ಭತ್ತದ ಸಸಿಮಡುಗಳು ಕೊಚ್ಚಿ ಹೋಗಿವೆ. ತೀರ್ಥಹಳ್ಳಿ ತಾಲೂಕಿನ ಪ್ರಸಿದಟಛಿ ಪ್ರವಾಸಿ ತಾಣವಾದ ಕವಲೇದುರ್ಗ ಕೋಟೆಗೆ ಹೋಗುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಕೋಟೆ ಹಾಗೂ ಮಠಕ್ಕೆ ಹೋಗುವ ಸಂಚಾರ ಅಸ್ತವ್ಯಸ್ಥಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next