Advertisement
ತಾಲೂಕಿನ ಮದಲಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 6ನೇ ತಗರತಿಗೆ ವಿವಿಧ ವಸತಿ ನಿಲಯ ಪ್ರವೇಶ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ರಚನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸರ್ಕಾರಿ ಶಾಲಾ ಮಕ್ಕಳು ಹೆಚ್ಚು ಆಯ್ಕೆಯಾಗಬೇಕೆಂಬ ಉದ್ದೇಶದಿಂದ ಪೂರಕ ತಯಾರಿಯಾಗಿ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರದಲ್ಲಿ ಸಂಪನ್ಮೂಲ ಶಿಕ್ಷಕರಿಂದ ಆಯಾ ಸ್ಪರ್ಧಾತ್ಮಕ ಪರೀಕ್ಷೆ ಪತ್ರಿಕೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗಿದೆ. ಈ ಮಾದರಿ ಪ್ರಶ್ನೆ ಪತ್ರಿಕೆಯ ಮಾದರಿಗಳನ್ನು ಎಲ್ಲಾ ಶಾಲೆಯ 5ನೇ ತಗರತಿಯ ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತೆ ಪರೀಕ್ಷೆ ನಡೆಸಿ, ಸ್ಪರ್ಧಾತ್ಮಕ ಪರೀಕ್ಷಾ ಭಯ ಇನ್ನಿಲ್ಲವಾಗಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಸ್ಪಷ್ಟ ಓದು, ಶುದ್ಧ ಬರಹಕ್ಕೂ ಆದ್ಯತೆ ವಹಿಸಲಾಗುತ್ತಿದೆ. ತಾಲೂಕಿನಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತಿದೆ.ಕಚೇರಿಯ ಆಡಳಿತ ನಿರ್ವಹಣೆಗಿಂತ ಶೈಕ್ಷಣಿಕಕ್ಕೆ ಹೆಚ್ಚು ಆದ್ಯತೆ ವಹಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಸಾಮಾನ್ಯ ಪರೀಕ್ಷೆ, ವಾರ್ಷಿಕ ಪರೀಕ್ಷೆಗಳಲ್ಲಿ ಸರ್ಕಾರಿ ಶಾಲಾ ಮಕ್ಕಳು ಹೆಚ್ಚು ಉತ್ತೀರ್ಣರಾಗಿಸುವ ಉದ್ದೇಶ ಹೊಂದಲಾಗಿದೆ ಎಂದರು.
Advertisement
ಪರೀಕ್ಷೆಯಿಂದ ಜ್ಞಾಪಕಶಕ್ತಿ ಹೆಚ್ಚಳ
04:03 PM Nov 26, 2018 | |
Advertisement
Udayavani is now on Telegram. Click here to join our channel and stay updated with the latest news.