Advertisement

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

10:10 PM Nov 19, 2024 | Team Udayavani |

ಮೈಸೂರು: ಸರಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ದಲಿತರಿಗೆ ಮೀಸಲಾತಿ ನೀಡಿದಂತೆ, ಅಲ್ಪಸಂಖ್ಯಾಕರಿಗೂ ಕೊಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

Advertisement

ನಗರದಲ್ಲಿ ರಾಜ್ಯ ಸರಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಮಂಗಳವಾರ ನಡೆದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತನಾಡಿ, ಮುಸ್ಲಿಮರಿಗಿದ್ದ ಶೇ.4ರಷ್ಟಿದ್ದ 2 ಬಿ ಮೀಸಲಾತಿಯನ್ನು ಹಿಂದಿನ ಬಿಜೆಪಿ ಸರ್ಕಾರವು ರದ್ದುಪಡಿಸಿದಾಗ, ಸುಪ್ರೀಂ ಕೋರ್ಟ್‌ ಮುಂದಿನ ಆದೇಶದವರೆಗೂ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದಂತೆ ತೀರ್ಪು ನೀಡಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಯೋಜನೆಗಳ ಉದ್ದೇಶದಲ್ಲಿ ಸ್ಪಷ್ಟತೆ ಇಲ್ಲವಾಗಿದೆ ಎಂದರು.

ದಲಿತರಿಗಿಂತಲೂ ಹಿಂದುಳಿದ ಮುಸ್ಲಿಂ
ಸಮುದಾಯ: ಸಚಿವ ಮಹದೇವಪ್ಪ
ಮೈಸೂರು: ದಲಿತ ಸಮುದಾಯಕ್ಕಿಂತಲೂ ಮುಸ್ಲಿಂ ಸಮುದಾಯ ತೀರ ಹಿಂದುಳಿದಿದೆ. ಮುಸ್ಲಿಮರಿಗೆ ಮೀಸಲಾತಿ ಅಗತ್ಯವಾಗಿದ್ದು, ಮುಸ್ಲಿಮರಿಗೆ ಮೀಸಲಾತಿ ನೀಡಲು ನಮ್ಮ ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನ ಮಾಡಲಿದೆ ಎಂದು ಸಚಿವ ಡಾ.ಎ ಚ್‌.ಸಿ. ಮಹದೇವಪ್ಪ ಹೇಳಿದರು.

ನಗರದಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಮಂಗಳವಾರ ನಡೆದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತನಾಡಿ, ಧರ್ಮದ ಹೆಸರಿನಲ್ಲಿ ಮೀಸಲಾತಿಗೆ ಅವಕಾಶ ಇಲ್ಲ. ಆದರೂ ಇ.ಡಬ್ಲ್ಯೂ.ಎಸ್‌ಗೆ ಶೇ.10 ಮೀಸಲಾತಿ ನೀಡಲಾಗಿದೆ. ಇದಕ್ಕೆ ಸಂವಿಧಾನದಲ್ಲೇ ಅವಕಾಶ ಇಲ್ಲ. ಹಿಂದುಳಿದ ಸಮುದಾಯವಾದ ಮುಸ್ಲಿಮರಿಗೆ ಏಕೆ ಮೀಸಲಾತಿ ನೀಡಬಾರದು ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next