ಬೆಂಗಳೂರು: ಕಳೆದ ಬಾರಿಯ ಬಜೆಟ್ (2019-20ರ ಅಯವ್ಯಯ)ನಲ್ಲಿ ಘೋಷಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿರುವ ಕಾನ್‌ಸ್ಟೆಬಲ್ ಮತ್ತು ಹೆಡ್‌ಕಾನ್‌ಸ್ಟೆಬಲ್ ಗಳ ಮಾಸಿಕ ಕಷ್ಟ ಪರಿಹಾರ ಭತ್ತೆಯನ್ನು 1 ಸಾವಿರ ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಆರನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್, ಹೆಡ್‌ಕಾನ್‌ಸ್ಟೆಬಲ್ಗಳಿಗೆ 2019ರ ಜ.19ರಂದು ಒಂದು ಸಾವಿರ ರೂ. ಕಷ್ಟ ಪರಿಹಾರ ಭತ್ತೆಯನ್ನು ಮಂಜೂರು ಮಾಡಲಾಗಿತ್ತು. ಅದರೊಂದಿಗೆ 2019-20ನೇ ಸಾಲಿನ ಬಜೆಟ್‌ನಲ್ಲಿ ಕಾನ್‌ಸ್ಟೆಬಲ್ಗಳಿಗೆ ನೀಡಲಾಗುವ ಕಷ್ಟ ಪರಿಹಾರ ಭತ್ತೆಯನ್ನು ಒಂದು ಸಾವಿರದಿಂದ ಎರಡು ಸಾವಿರ ರೂ.ಗೆ ಹೆಚ್ಚಳ ಮಾಡುವುದಾಗಿ ಉಲ್ಲೇಖೀಸಲಾಗಿತ್ತು. ಜು.1ರಿಂದ ಅನ್ವಯವಾಗುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Advertisement