Advertisement

ಕೆರೆಗಳ ನಿರ್ಮಾಣದಿಂದ ಅಂತರ್ಜಲ ಪ್ರಮಾಣ ಹೆಚ್ಚಳ

04:04 PM Jun 17, 2022 | Team Udayavani |

ಮಾನ್ವಿ: ಪ್ರತಿಯೊಂದು ಗ್ರಾಮಗಳಲ್ಲಿ ಕೆರೆಗಳನ್ನು ನಿರ್ಮಿಸುವುದರಿಂದ ಗ್ರಾಮದಲ್ಲಿ ಅಂತರ್ಜಲ ಪ್ರಮಾಣ ಹೆಚ್ಚಾಗುತ್ತದೆ ಎಂದು ತಾಲೂಕು ಐಇಸಿ ಸಂಯೋಜಕ ಈರೇಶ ತಿಳಿಸಿದರು.

Advertisement

ನೀರಮಾನ್ವಿ ಗ್ರಾಮದ ಕೆರೆ ಪ್ರದೇಶದಲ್ಲಿ ತಾಪಂ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಡೆದ ಕೆರೆ ಹುಳು ಎತ್ತುವ ಪ್ರದೇಶದಲ್ಲಿ ದುಡಿಯೋಣ ಬಾ ಅಭಿಯಾನದಡಿ ರೋಜಗಾರ್‌ ದಿವಸ್‌ಗೆ ಚಾಲನೆ ನೀಡಿ ಮಾತನಾಡಿದರು.

ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತದೆ. ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಾಗೂ ಜನರ ನಿತ್ಯ ಬಳಕೆಯ ಅವಶ್ಯಕತೆಗಾಗಿ ಕೆರೆಗಳ ನಿರ್ಮಾಣ ಹಾಗೂ ಕೆರೆ-ಬದುಗಳ ಸಂರಕ್ಷಣೆ, ನೀರಿನ ಸಂಗ್ರಹಣೆ ಅಗತ್ಯವಾಗಿದೆ. ಕೂಲಿ ಕಾರ್ಮಿಕರಿಗೆ ಅಗತ್ಯ ಕೆಲಸದ ಪ್ರಮಾಣ, 309 ರೂ. ಕೂಲಿ, ಬೇಸಿಗೆಯ ರಿಯಾಯಿತಿ, ವಿಮೆ ಸೌಲಭ್ಯ ನೀಡಲಾಗುವುದು ಎಂದರು. ಬಿ.ಎಪ್ಟಿ ಅಧಿಕಾರಿ ಸಿದ್ದರಾಮ ಹಾಗೂ ಕೂಲಿ ಕಾರ್ಮಿಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next