Advertisement
10 ಸಾವಿರ ಕ್ಯೂಸೆಕ್ಸ್ ಹರಿವು: ಜಲಾಶಯದ ಗರಿಷ್ಟ ಮಟ್ಟ 2,284 ಅಡಿಗಳಷ್ಟಿದ್ದು, ಜಲಾಶಯಕ್ಕೆ ಹರಿದು ಬರುತ್ತಿದ್ದ 4 ರಿಂದ 5 ಸಾವಿರ ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಕಳೆದ ಎರಡು ದಿನಗಳಿಂದ ಏರಿಕೆ ಕಂಡು 10 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ 2.271.62 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 2,282 ನೀರು ಸಂಗ್ರಹವಿತ್ತು. 36 ಸಾವಿರ ಕ್ಯೂಸೆಕ್ ನೀರನ್ನು ನಾಲ್ಕು ಕ್ರಸ್ಟ್ ಗೇಟ್‌ಗಳ ಮೂಲಕ ಮುಂಭಾಗದ ನದಿಗೆ ಹರಿಸಲಾಗುತ್ತಿತ್ತು.
Related Articles
Advertisement
ಕೇರಳದ ವೈನಾಡು ಭಾಗ ಹಾಗೂ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದೆ. ಹೀಗಾಗಿ ಜಲಾಶಯದ ಒಳಹರಿವಿನ ಪ್ರಮಾಣ ಕೂಡ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ಇದೇ ಒಳಹರಿವು ಇನ್ನಷ್ಟು ಇದ್ದಲ್ಲಿ ಶೀಘ್ರವೇ ಜಲಾಶಯ ಭರ್ತಿಯಾಗಲಿದೆ.-ಮೊಳಗಾವಿ, ಕಬಿನಿ ಪ್ರಭಾರ ಸಹಾಯಕ ಎಂಜಿನಿಯರ್ ತಾಲೂಕಿನಲ್ಲಿ ಈ ಬಾರಿ ಮಳೆಯ ಪ್ರಮಾಣ ಸಾಕಷ್ಟು ಕಡಿಮೆಯಾಗಿದೆ. ತಾಲೂಕಿನಲ್ಲಿ ನಾಲ್ಕು ಜಲಾಶಯಗಳು ಇದ್ದರೂ ಇನ್ನೂ ಒಂದು ಕೆರೆ ಕಟ್ಟೆಯೂ ತುಂಬಿಲ್ಲ. ಹೀಗಿರುವಾಗ ಜಲಾಶಯದಲ್ಲಿ ಸಂಗ್ರವಾಗುತ್ತಿರುವ ನೀರನ್ನು ಅಧಿಕಾರಿಗಳು ಕೋರ್ಟ್ ಆದೇಶ ನೆಪವೊಡ್ಡಿ ತಮಿಳುನಾಡಿಗೆ ಬಿಟ್ಟು ಡ್ಯಾಂ ಬರಿದು ಮಾಡುತ್ತಿದ್ದಾರೆ. ತಮಿಳುನಾಡಿಗೆ ಹರಿಯುತ್ತಿರುವ ನೀರನ್ನು ನಿಲ್ಲಿಸಿ ಇಲ್ಲಿನ ರೈತರ ಹಿತ ಕಾಯಬೇಕು.
-ಜಕ್ಕಹಳ್ಳಿ ರವಿಕುಮಾರ್, ರೈತ ಸಂಘದ ತಾಲೂಕು ಅಧ್ಯಕ್ಷ * ಬಿ.ನಿಂಗಣ್ಣಕೋಟೆ