Advertisement

ಕ್ರೀಡೆಯಿಂದ ದೇಶಗಳ ಬಾಂಧವ್ಯ ವೃದ್ಧಿ:ನಳಿನ್‌

07:45 AM Dec 12, 2017 | Team Udayavani |

ಮಂಗಳೂರು: ಕ್ರೀಡೆಯಿಂದ ದೇಶ-ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಾಗುತ್ತದೆ. ಇದಕ್ಕೆ ಜಾತಿ-ಧರ್ಮ, ಭಾಷೆಯ ಹಂಗಿಲ್ಲ ಎಂದು ಸಂಸದ ನಳಿನ್‌ಕುಮಾರ್‌ ಕಟೀಲು ಅಭಿಪ್ರಾಯಪಟ್ಟರು. 

Advertisement

ದಕ್ಷಿಣ ಕನ್ನಡ ಅಥ್ಲೆಟಿಕ್‌ ಅಸೋಸಿಯೇಶನ್‌ ವತಿಯಿಂದ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ದಕ್ಷಿಣ ಕನ್ನಡ, ಉಡುಪಿ ಮತ್ತು ಶ್ರೀಲಂಕಾ ಜ್ಯೂನಿಯರ್‌ ಅಥ್ಲೆಟಿಕ್‌ ಮೀಟ್‌ನ್ನು ಅವರು ಸೋಮವಾರ ಉದ್ಘಾಟಿಸಿದರು.
ಕ್ರೀಡೆಯಿಂದ ಮಾನಸಿಕ, ದೈಹಿಕವಾಗಿ ಸದೃಢರಾಗಲು ಸಾಧ್ಯ. ಪ್ರತಿಯೊಬ್ಬರೂ ಕ್ರೀಡಾ ಮನೋಭಾವದೊಂದಿಗೆ ಯಶಸ್ಸಿನತ್ತ ದಾಪುಗಾಲಿಡಬೇಕು. ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಖಾಸಗಿ-ಸರಕಾರಿ ವಲಯದಲ್ಲಿ ಔದ್ಯೋಗಿಕ ಮೀಸಲಾತಿಗಳೂ ಇರುವುದರಿಂದ ಅದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಅವರು ಹೇಳಿದರು.

ಮೇಯರ್‌ ಕವಿತಾ ಸನಿಲ್‌, ಕರ್ನಾಟಕ ಅಥ್ಲೆಟಿಕ್‌ ಅಸೋಸಿಯೇಶನ್‌ ಕಾರ್ಯದರ್ಶಿ ಚಂದ್ರಶೇಖರ್‌ ರೈ, ಮಾಜಿ ಅಂತಾರಾಷ್ಟ್ರೀಯ ಅಥ್ಲೆಟ್‌ ಉದಯ್‌ ಕೆ. ಪ್ರಭು, ಉಡುಪಿ ಜಿಲ್ಲಾ ಅಥ್ಲೆಟಿಕ್‌ ಅಸೋಸಿಯೇಶನ್‌ ಅಧ್ಯಕ್ಷ ದಿನೇಶ್‌ ಪುತ್ರನ್‌, ಶ್ರೀಲಂಕಾದ ಸಿಲೋನೀಸ್‌ ಟ್ರಾÂಕ್‌ ಆ್ಯಂಡ್‌ ಫೀಲ್ಡ್‌ ಕ್ಲಬ್‌ನ ಕಾರ್ಯದರ್ಶಿ ಡಿ. ಎ. ಯಾಸರೋಹನ ಡಿಸಿಲ್ವ ಗೌರವ ಅತಿಥಿಗಳಾಗಿದ್ದರು.

ಡಿಕೆಎಎ ಅಧ್ಯಕ್ಷ ಮಂಜುನಾಥ ಭಂಡಾರಿ, ಕಾರ್ಯದರ್ಶಿ ತಾರನಾಥ ಶೆಟ್ಟಿ ಎ. ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next