Advertisement

ವಿವೇಕಾನಂದರ ತತ್ವಾದರ್ಶ ಮೈಗೂಡಿಸಿಕೊಳ್ಳಿ

03:32 PM Jan 13, 2018 | |

ಯಾದಗಿರಿ: ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶ ಪ್ರತಿಯೊಬ್ಬರು ಮೈಗೂಡಿಸಿಕೊಂಡಾಗ ಮಾತ್ರ ಸದೃಢ
ದೇಶ ನಿರ್ಮಾಣ ಸಾಧ್ಯ ಎಂದು ರಾಮಕೃಷ್ಣ ವಿವೇಕಾನಂದ ಸಂಸ್ಥೆ ಮುಖ್ಯಸ್ಥ ವೇಣುಗೋಪಾಲ ಹೇಳಿದರು.

Advertisement

ಜಿಲ್ಲಾಡಾಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ
ಹಮ್ಮಿಕೊಂಡ 2017-18ನೇ ಸಾಲಿನ ಸ್ವಾಮಿ ವಿವೇಕಾನದಂರ ಜಯಂತಿ ಮತ್ತು ಜಿಲ್ಲಾಮಟ್ಟದ ಯುವ ಸಮ್ಮೇಳನ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. 

ಇಂದಿನ ಯುವ ಪೀಳಿಗೆಯ ಸಮಾಜಕ್ಕೆ ಸ್ವಾಮಿ ವಿವೇಕಾನದಂರ ಬದುಕು, ಬರಹ, ಜೀವನಾದರ್ಶ ತಿಳಿದುಕೊಳ್ಳುವುದು ಅಗತ್ಯವಾಗಿದೆ. ದೇಶದ ಸಂಸ್ಕೃತಿ-ಸಂಪ್ರದಾಯವನ್ನು ಎತ್ತಿ ತೋರಿಸಿದ ವಿವೇಕಾನಂದರು ದೇಶದಲ್ಲಿಯೇ ಒಬ್ಬ ಮಹಾನ್‌ ಚೇತನರಾಗಿದ್ದಾರೆ. ಹೀಗಾಗಿ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದ
ಅವರ ಭಾಷಣದಿಂದ ಇಡೀ ವಿಶ್ವವೇ ಬೆರಗಾಯಿತು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಸೂಗಪ್ಪ ಪಾಟೀಲ ಮಾತನಾಡಿ, ದೇಶದ ಮಹಾನ್‌ ವ್ಯಕ್ತಿಗಳ ಜೀವನ ಚರಿತ್ರೆ ಮತ್ತು ಸಾಧನೆ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡಾಗ ದೇಶದಲ್ಲಿ ಸಮಾಜದಲ್ಲಿ ಉನ್ನತ ಸಾಧನೆ ಮಾಡಬಹುದಾಗಿದೆ. ವಿವೇಕಾನಂದರ ಸಾಧನೆಗಳನ್ನು ಮುಂದೆ ಇಟ್ಟುಕೊಂಡು ಸಮಾಜದಲ್ಲಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮಾಡಬೇಕಾಗಿದೆ ಸಲಹೆ
ನೀಡಿದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ ಆಲ್ದಾಳ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯನು ತನ್ನ ಆದರ್ಶ-ಸಾಧನೆ ಬಗ್ಗೆ ಆತ್ಮಾವಲೋಕನ ಮಾಡಿಕೊಂಡಾಗ ಮಾತ್ರ
ಜೀವನದಲ್ಲಿ ಬದಲಾವಣೆ ಆಗಬಹುದು ಎಂದು ಹೇಳಿದರು.

Advertisement

ಈ ಸಂದರ್ಭದಲ್ಲಿ ಎನ್‌.ಎಸ್‌.ಎಸ್‌ ಅಧಿಕಾರಿ ನೆಹರು ಮೈಲಿ, ಸ್ಕೌಟ್ಸ್‌ ಮತ್ತು ಗೈಡ್ಸನ ಸಿ.ಎಂ. ಪಟ್ಟೇದಾರ, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ನ (ಡಿಒಸಿ) ಶ್ರೀ ಮಸಲಿಂಗಪ್ಪನಾಯಕ, ಎಸ್‌.ಬಿ.ಐ. ನಿವೃತ್ತ ಮಾನೇಜರ್‌ ಶ್ರೀ ಮಹಾದೇವಪ್ಪ, ಕಲಾವಿದ ಶರಣು ನಾಟೇಕರ ಇನ್ನಿತರರು ಇದ್ದರು.
 
ಜನಮನ ಸೆಳೆದ ಮೆರವಣಿಗೆ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಜಿಲ್ಲಾಮಟ್ಟದ ಯುವ ಸಮ್ಮೇಳನ
ಕಾರ್ಯಕ್ರಮ ನಿಮಿತ್ತ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕ್ರೀಡಾಂಗಣದವರೆಗೂ ಅದ್ಧೂರಿಯಾಗಿ ಸ್ವಾಮಿ ವಿವೇಕಾನಂದರ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿಪಾಟೀಲ ಅನಪುರ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ವಿದ್ಯಾರ್ಥಿಗಳ ಕೋಲಾಟ, ನೃತ್ಯ, ಹಲಗೆ, ಡೊಳ್ಳು ಕುಣಿತ, ಕುದುರೆ ಕುಣಿತ ಗಮನ ಸೆಳೆಯಿತು.

Advertisement

Udayavani is now on Telegram. Click here to join our channel and stay updated with the latest news.

Next