Advertisement
2018-19ನೇ ಸಾಲಿನಲ್ಲಿ ಒಟ್ಟು 34 ಶಾಲೆಗಳಿಂದ 660 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿ 42 ಶಾಲೆಗಳಿಂದ 956 ಮಂದಿ ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಕಲಿಯುತ್ತಿದ್ದಾರೆ. ಪ್ರಸಕ್ತ ವರ್ಷ ದ.ಕ., ಉಡುಪಿ ಜಿಲ್ಲೆಗಳ 42 ಶಾಲೆಗಳಲ್ಲಿ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಒಟ್ಟು 2,600 ಮಂದಿ ತೃತೀಯ ಭಾಷೆಯಾಗಿ ಕಲಿಯುತ್ತಿದ್ದಾರೆ.
2014-15ರ ಪ್ರಥಮ ಬ್ಯಾಚ್‌ನಲ್ಲಿ ಒಂದು ಶಾಲೆಯಿಂದ 18 ಮಂದಿ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದರು. 2015-16ರಲ್ಲಿ ಎರಡನೇ ಬ್ಯಾಚ್‌ನಲ್ಲಿ 3 ಶಾಲೆಗಳಿಂದ 25 ವಿದ್ಯಾರ್ಥಿಗಳು, 2016-17ನೇ ಸಾಲಿನಲ್ಲಿ 12 ಶಾಲೆಗಳಿಂದ 283, 2017-18ನೇ ಸಾಲಿನಲ್ಲಿ 22 ಶಾಲೆಗಳಿಂದ 417 ವಿದ್ಯಾರ್ಥಿಗಳು ತುಳು ಪರೀಕ್ಷೆ ಬರೆದಿದ್ದರು. 2018-19ರಲ್ಲಿ 34 ಶಾಲೆಗಳಿಂದ 660 ಮಂದಿ ವಿದ್ಯಾರ್ಥಿಗಳು ತುಳು ಪರೀಕ್ಷೆ ಬರೆದಿದ್ದು, ಈ ವರ್ಷ 39 ಶಾಲೆಗಳಿಂದ 956 ಮಂದಿ ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ತುಳು ಪರೀಕ್ಷೆ ಎದುರಿಸಲು ಸಿದ್ಧವಾಗಿದ್ದಾರೆ.
Related Articles
ಉಭಯ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಪುತ್ತೂರು ತಾಲೂಕಿನಲ್ಲಿ ಅತೀ ಹೆಚ್ಚು ಮಂವಿ ವಿದ್ಯಾರ್ಥಿಗಳು ಹತ್ತನೇ ತರಗತಿ ಕಲಿಯುತ್ತಿದ್ದಾರೆ. ಪುತ್ತೂರು ತಾಲೂಕಿನಲ್ಲಿ 346, ಸುಳ್ಯ ತಾಲೂಕಿನಲ್ಲಿ 66, ಬೆಳ್ತಂಗಡಿ ತಾಲೂಕಿನಲ್ಲಿ 342, ಬಂಟ್ವಾಳ ತಾಲೂಕಿನಲ್ಲಿ 57, ಮಂಗಳೂರು ತಾಲೂಕಿನಲ್ಲಿ 63, ಉಡುಪಿ ತಾಲೂಕಿನಲ್ಲಿ 82 ಸೇರಿದಂತೆ 956 ವಿದ್ಯಾರ್ಥಿಗಳು ಈ ಬಾರಿ ಎಸೆಸ್ಸೆಲ್ಸಿ ಕಲಿಯುತ್ತಿದ್ದಾರೆ.
Advertisement
ಕಳೆದ ಐದು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಎಸೆಸ್ಸೆಲ್ಲಿಯಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ಕಲಿಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಮುಂದಿನ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಮತ್ತಷ್ಟು ಹೆಚ್ಚಿಸುವ ದೃಷ್ಟಿಯಿಂದ ಈಗಾಗಲೇ ತುಳು ಪಠ್ಯ ಕಲಿತ ವಿದ್ಯಾರ್ಥಿಗಳಿಂದ ಇತರ ವಿದ್ಯಾರ್ಥಿಗಳಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಾ ಕೂಟ ಏರ್ಪಡಿಸುವ ಚಿಂತನೆ ಇದೆ.– ದಯಾನಂದ ಕತ್ತಲ್‌ಸಾರ್, ತುಳುಸಾಹಿತ್ಯ ಅಕಾಡೆಮಿ ಅಧ್ಯಕ್ಷ