Advertisement
ನಗರದಲ್ಲಿರುವ ಆಸ್ಪತ್ರೆಗಳು, ಶಾಲಾ- ಕಾಲೇಜುಗಳು, ಧಾರ್ಮಿಕ ಕೇಂದ್ರಗಳು, ಕೋರ್ಟ್ ಹಾಗೂ ಶೈಕ್ಷಣಿಕ ಸಂಸ್ಥೆಗಳ 100 ಮೀ. ವ್ಯಾಪ್ತಿಯನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲಾಗುತ್ತದೆ. ಈ ಪ್ರದೇಶಗಳಲ್ಲಿ ರಾಷ್ಟ್ರೀಯ ಶಬ್ದ ಮಾಲಿನ್ಯ ಪ್ರಮಾಣಕ್ಕಿಂತ ಹೆಚ್ಚು ಶಬ್ದ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.
Related Articles
Advertisement
ಮಾಪನ ಕೇಂದ್ರದ ಅಂಕಿ- ಅಂಶಗಳ ಪ್ರಕಾರ ವಸತಿ ಪ್ರದೇಶಗಳಲ್ಲಿ ಹಗಲಿನಲ್ಲಿ 55 ಡೆಸಿಬಲ್, ರಾತ್ರಿ 45 ಡೆಸಿಬಲ್ ನಷ್ಟು ಶಬ್ದ ಇರಬೇಕು. ಆದರೆ, ಹೆಚ್ಚುತ್ತಿರುವ ವಾಹನ ದಟ್ಟಣೆ, ಕಾಮಗಾರಿ ನಿರ್ಮಾಣದಿಂದಾಗಿ ಈ ಬ್ಯಾಕ್‌ಗ್ರೌಂಡ್ ಶಬ್ದಮಾಲಿನ್ಯ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಅವರು, ನಗರದಲ್ಲಿ ಶಬ್ದ ನಿಯಮ-2000 ಪ್ರಕಾರ ಶಬ್ದ ಪ್ರಮಾಣ ಹೆಚ್ಚಾಗದಂತೆ ಯೋಜನೆ ರೂಪಿಸಲಾಗುತ್ತಿದೆ. ನಗರದಲ್ಲಿ 88 ಲಕ್ಷಕ್ಕೂ ಅಧಿಕ ವಾಹನಗಳಿದ್ದು, ಶಬ್ದ ಮಾಲಿನ್ಯ ಹೆಚ್ಚಾಗುತ್ತಿದೆ. ಅಲ್ಲದೆ, ಶೇ.40 ವಾಯುಮಾಲಿನ್ಯ ಉಂಟಾಗುತ್ತಿದೆ. ಶಬ್ದದ ಗರಿಷ್ಠಮಟ್ಟ ಮೀರಿರುವ ವಾಹನಗಳ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ, ಆರ್‌ಟಿಒ ಹಾಗೂ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.