Advertisement
ಎರಡೇ ವರ್ಷಗಳಲ್ಲಿ 56,186 ಗರ್ಭಪಾತಗಳು ನಡೆದಿವೆ. ಇವುಗಳಲ್ಲಿ ಹೆಣ್ಣು ಭ್ರೂಣ ಹತ್ಯೆಯೂ ಸೇರಿದೆ ಎನ್ನುವ ಅನುಮಾನ ದಟ್ಟವಾಗಿದೆ. ರಾಜ್ಯದಲ್ಲಿ ಕಟ್ಟುನಿಟ್ಟಿನ ಕಾಯ್ದೆಗಳ ಹೊರತಾಗಿಯೂ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ನಡೆಯುತ್ತಿದೆ. 2015ರಲ್ಲಿ 12,754, 2016ರಲ್ಲಿ 14,877 ಗರ್ಭಪಾತದ ಪ್ರಕರಣಗಳು ದಾಖಲಾಗಿದ್ದು, ಈ ಪ್ರಮಾಣ 2017ಕ್ಕೆ ಏಕಾಏಕಿ 29,534ಕ್ಕೆ ಏರಿಕೆಯಾಗಿದೆ. 2018ರಲ್ಲಿಯೂ 26,652ರಷ್ಟು ಗರ್ಭಪಾತ ಪ್ರಕರಣಗಳು ದಾಖಲಾಗಿವೆ.
Related Articles
Advertisement
ತಡವಾಗಿ ಮದುವೆ, ಮದುವೆಯಾದ ಮೇಲೂ ಹಲವು ವರ್ಷ “ಪ್ಲ್ರಾನಿಂಗ್’ ಮಾಡಿಕೊಳ್ಳುವುದು. ಭ್ರೂಣದ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಇತ್ತೀಚಿನ ದಿನಗಳಲ್ಲಿ “ಮಿಸ್ಡ್ ಅಬೋರ್ಷನ್’ ಪ್ರಕರಣಗಳು (ಏಳುವಾರಗಳ ನಂತರ ಭ್ರೂಣದ ಹೃದಯ ಬಡಿತ ನಿಂತು ಹೋಗುವುದು) ಹೆಚ್ಚಾಗುತ್ತಿದೆ ಎಂದು ವಿವರಿಸುತ್ತಾರೆ.
ಮಕ್ಕಳಾಗುವ ಮುನ್ನ ಕೌನ್ಸಿಲಿಂಗ್ ಮಾಡಿಸಿಕೊಳ್ಳುವುದು ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ದಂಪತಿಗಳು ರೂಢಿಸಿಕೊಳ್ಳುವುದರಿಂದ ಇಂತಹ ಸಮಸ್ಯೆಗಳನ್ನು ತಪ್ಪಿಸಬಹುದು ಎಂದು ಅವರು ಸಲಹೆ ನೀಡುತ್ತಾರೆ.
ನೆರೆ ರಾಜ್ಯಗಳಿಂದಲೂ ಜನ ಬರುತ್ತಿದ್ದಾರೆ: ನೆರೆಯ ರಾಜ್ಯಗಳಿಂದಲೂ ಭ್ರೂಣ ಲಿಂಗಪತ್ತೆಗೆ ಜನ ಬರುತ್ತಿದ್ದಾರೆ. ರಾಜ್ಯದಲ್ಲಿ “ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ-1994’ನ್ನು ಜಾರಿಗೆ ತರಲು 2016ರಲ್ಲಿ ಸುಪ್ರೀಂಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಮಾಜಿ ಶಾಸಕ ಹಾಗೂ ವೈದ್ಯ ಡಾ. ಸಾರ್ವಭೌಮ ಎಸ್.ಬಗಲಿ ಕಳೆದ ವರ್ಷ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಉತ್ತರ ಕರ್ನಾಟಕದ ಭಾಗದ ವಿಜಯಪುರ, ಬೆಳಗಾವಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳು ಮಹಾರಾಷ್ಟ್ರದ ಗಡಿ ಭಾಗಕ್ಕೆ ಹೊಂದಿಕೊಂಡಿವೆ. ಈ ಜಿಲ್ಲೆಗಳಿಗೆ ನೆರೆಯ ಮಹಾರಾಷ್ಟ್ರದಿಂದ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಜನ ಬಂದು ಭ್ರೂಣ ಲಿಂಗ ಪತ್ತೆ ಮಾಡಿಸಿಕೊಂಡು ಹೋಗುತ್ತಾರೆ. ಇಂಡಿಯಿಂದ ಮಹಾರಾಷ್ಟ್ರ ಕೇವಲ 7 ಕಿ.ಮೀ ಇದೆ. ಇಲ್ಲಿಗೂ ಜನ ಬಂದು ಭ್ರೂಣ ಲಿಂಗ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ ಎಂದು ದೂರು ದಾಖಲಿಸಲಾಗಿತ್ತು.
ಇದೇ ರೀತಿ ಇತ್ತೀಚಿಗೆ ತುಮಕೂರಿನ ಪಾವಗಡದಲ್ಲೂ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಹೆಚ್ಚುತ್ತಿರುವುದರ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ತುಮಕೂರಿನ ಪಾವಗಡಕ್ಕೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಡಕಶಿರಾ, ಅಮರಾಪುರ ಮತ್ತು ಕಲ್ಯಾಣದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಗರ್ಭಿಣಿಯರು ಬರುತ್ತಿರುವ ಬಗ್ಗೆ ಎಚ್ಚರಿಕೆ ವಹಿಸುವಂತೆ ಹೇಳಲಾಗಿದೆ. ಇದು ರಾಜ್ಯದಲ್ಲಿ ಅವ್ಯಾಹತವಾಗಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ನಡೆಯುತ್ತಿದೆ ಎನ್ನುವುದನ್ನು ಸಾಬೀತುಪಡಿಸುವಂತಿದೆ.
* ಹಿತೇಶ್ ವೈ