Advertisement
ವೈದ್ಯರು/ತಂಡ ಕ್ಷೇತ್ರ ವೀಕ್ಷಣೆಗೆ ತೆರಳುವ ವೇಳೆ ಮತ್ತು ಸಾರ್ವಜನಿಕರು ಆರೋಗ್ಯ ಕೇಂದ್ರಕ್ಕೆ ಆಗಮಿಸುವಾಗ ಈ ಅರಿವು ಮೂಡಿಸಲಾಗುತ್ತದೆ. ವೈದ್ಯರು ಹೇಳುವಂತೆ ಉಷ್ಣಾಂಶ ಹೆಚ್ಚಾದಂತೆ ಹಲವಾರು ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಬಿಸಿಲಿನ ಉರಿಗೆ ಬೆವರುವ ಕಾರಣ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುತ್ತದೆ. ಆಗ ದೇಹದಲ್ಲಿ ರೋಗ ನಿರೋಧಕ ಶಕ್ತಿಯೂ ಕುಂದುತ್ತದೆ.
Related Articles
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಗರಿಷ್ಠ ತಾಪಮಾನ ವಾಡಿಕೆಗಿಂತ ಏರಿಕೆಯಾಗುತ್ತಿದೆ. ಈ ಸಮಯ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತೀ ಮುಖ್ಯ. ಇದೇ ಕಾರಣಕ್ಕೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯೂ ಮುಂದಾಗಿದೆ. ಸೆಕೆಯ ಪರಿಣಾಮ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ವಿವಿಧ ರೋಗಗಳಿಗೂ ತುತ್ತಾಗುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಹೆಚ್ಚಾಗಿ ನೀರು ಕುಡಿಯಬೇಕು. ರೋಗ ಲಕ್ಷಣ ಕಂಡುಬಂದರೆ ವೈದ್ಯರನ್ನು ಭೇಟಿಯಾಗಿ.– ಡಾ| ಕಿಶೋರ್ ಕುಮಾರ್, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ನಡೆಯುತ್ತಿದೆ ಫಿವರ್ ಸರ್ವೇ ಹವಾಮಾನ ಬದಲಾವಣೆಯಿಂದ ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈರಲ್ ಜ್ವರ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಫಿವರ್ ಸರ್ವೇ ನಡೆಯುತ್ತಿದೆ. ಮಂಗಳೂರು ಪಾಲಿಕೆ ವ್ಯಾಪ್ತಿ ಸಹಿತ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮನೆ ಮನೆ ಸರ್ವೇ ನಡೆಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಮಲೇರಿಯಾ ನಿಯಂತ್ರಣಾ ಕಾರ್ಯಕರ್ತರು, ಆರೋಗ್ಯ ಸುರಕ್ಷತಾ ಅಧಿಕಾರಿಗಳು ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಎಂಪಿಡಬ್ಲೂ ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಜ್ವರದ ಲಕ್ಷಣ ಇದ್ದರೆ ಅವರನ್ನು ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮನೆ ಮಂದಿಗೆ ಮಾಹಿತಿ ನೀಡುತ್ತಿದ್ದಾರೆ. ~ನವೀನ್ ಭಟ್ ಇಳಂತಿಲ