Advertisement
ಕಳೆದ ಮೂರು ನಾಲ್ಕು ತಿಂಗಳಿನಿಂದ ಒಂದು- ಎರಡು ಅಂಕಿ ದಾಟದ ಕೊರೊನಾ ಮೂರಂಕಿಗೆ ಬಂದುಬಿಟ್ಟಿದೆ. ಒಂದು ದಿನಕ್ಕೆ 200ರ ಹಾಸು ಪಾಸಿನಲ್ಲಿ ಸೋಂಕಿತರು ಕಂಡು ಬರುತ್ತಿರುವುದಲ್ಲದೆ, ಅಕ್ಕಪಕ್ಕಜಿಲ್ಲೆಗಳಲ್ಲಿ ಒಮಿಕ್ರಾನ್ ತನ್ನ ವೇಗವನ್ನುಹೆಚ್ಚಿಸಿಕೊಂಡಿರುವುದು ತುಮಕೂರುಜಿಲ್ಲೆಯ ಜನರನ್ನು ಆತಂಕಪಡುವಂತೆ ಮಾಡುತ್ತಿದೆ. ಈ ನಡುವೆ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಅವರ ಪುತ್ರಿ ಜೊತೆಗೆ ಶಿಕ್ಷಣ ಸಚಿವ ಬಿ.ಸಿ .ನಾಗೇಶ್ ಅವರಿಗೆ ಸೋಂಕು ಕಾಣಿಸಿಕೊಂಡಿದೆ. ಇವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇದೂ ಕೂಡಾ ಜನರ ಭೀತಿ ಹೆಚ್ಚುವಂತೆ ಮಾಡಿದೆ. ಒಂದೇ ದಿನಕ್ಕೆ 190-200ರವರೆಗೆ ಸೋಂಕಿತರು ಪತ್ತೆಯಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಭಯಹುಟ್ಟುವಂತೆ ಮಾಡುತ್ತಿದೆ.
Related Articles
Advertisement
ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದು ದಿನಕ್ಕೆ ಕನಿಷ್ಠ 200- 250ರೊಳಗೆ ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸೋಮವಾರದ ವರೆಗೆ ಜಿಲ್ಲೆಯಲ್ಲಿ ಸೋಂಕಿತರು 121919 ಇದ್ದು, ಇದೇ ರೀತಿ ಜಿಲ್ಲೆಯಲ್ಲಿ ಕೊರೊನಾ ತನ್ನ ವ್ಯಾಪ್ತಿಯನ್ನು ಹೆಚ್ಚು ಮಾಡುತ್ತಾ ಹೋದರೆ, ಫೆಬ್ರವರಿ ವೇಳೆಗೆ ಸೋಕಿತರು 1ಲಕ್ಷ 50 ಸಾವಿರ ಮೇಲಾಗುವ ಸಾಧ್ಯತೆ ಕಂಡು ಬಂದಿದೆ.
ಕೊರೊನಾ ಪರೀಕ್ಷೆಗೆ ಕ್ರಮ: 2021ರ ಡಿಸೆಂಬರ್ ಅಂತ್ಯದಲ್ಲಿ ಜಿಲ್ಲೆಯಲ್ಲಿ ಕಡಿಮೆಯಾಗಿದ್ದ ಕೊರೊನಾ ಈಗ ಚಳಿಗಾಲ ಜೊತೆಗೆ ಸುಡು ಬಿಸಿಲ ನಡುವೆಯೇ ಹೆಚ್ಚಳವಾಗುತ್ತಿದೆ. ಎಲ್ಲೆಡೆ ಕೊರೊನಾ ಪರೀಕ್ಷೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಒಂದು ದಿನಕ್ಕೆ 5000 ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಈಗ ಬರುತ್ತಿರುವ ಅಂಕಿ-ಅಂಶ ಗಮನಿಸಿದರೆ ವೈರಸ್ ವೇಗ ನಗರಪ್ರದೇಶದಲ್ಲಿ ಹೆಚ್ಚಳ ಕಂಡು ಬಂದಿದೆ. ಗ್ರಾಮಗಳಲ್ಲಿ ರೋಗಾಣು ಕಡಿಮೆಯಿದೆ. ಮುಂದೆ ಗ್ರಾಮಗಳಲ್ಲಿ ಹೆಚ್ಚು ಕಾಣಿಸಿಕೊಂಡರೆ,ನಿಯಂತ್ರಣ ಮಾಡುವುದು ಕಷ್ಟವಾಗಲಿದೆ. ಹೀಗಾಗಿ ಜನ ಜಾಗೃತರಾಗಬೇಕಿದೆ.
25 ಮಂದಿಗೆ ಮನೆಯಲ್ಲಿ ಚಿಕಿತ್ಸೆ :
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕಳೆದ ಒಂದುವಾರದಿಂದ ದಿನನಿತ್ಯ ಕೊರೊನಾ ಪ್ರಕರಣಗಳುದಾಖಲಾಗುತ್ತಿದೆ. ಮಂಗಳವಾರ 17 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. 25 ಮಂದಿ ಸೋಂಕಿತರು ತಮ್ಮ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 9 ಸೋಂಕಿತರು ಆಸ್ಪತ್ರೆಗಳಲ್ಲಿಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧ :
ಕೊರೊನಾ ಹೆಚ್ಚಳದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಸೋಂಕಿತರಿಗೆ ಚಿಕಿತ್ಸೆನೀಡಲು ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜು, ಸಿದ್ಧಾರ್ಥ ಆಸ್ಪತ್ರೆ, ಶ್ರೀದೇವಿ ಆಸ್ಪತ್ರೆ, ಸಿದ್ಧಗಂಗಾ ಆಸ್ಪತ್ರೆಸೇರಿದಂತೆ ನಗರದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲದೆ, ಪ್ರತಿ ತಾಲೂಕಿನಲ್ಲಿ 50 ಹಾಸಿಗಳುಲಭ್ಯವಿದೆ. ಸೋಂಕಿತರ ಸಂಖ್ಯೆಗೆ ಅನುಗುಣ ವಾಗಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧವಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ :
ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಅಗತ್ಯವಾಗಿರುವ ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯ ಕಲ್ಪಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಎಲ್ಲೆಡೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೀವ್ರ ಉಸಿರಾಟ ತೊಂದರೆ ಉಂಟಾದವರಿಗೆ ಐಸಿಯು ನಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಈಗ ಹೆಚ್ಚು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದ್ದು, ಮುಂದೆ ಸೋಂಕಿತರ ಸಂಖ್ಯೆ ಹೆಚ್ಚಾದರೆ ಎರಡು ಮೆಡಿಕಲ್ ಕಾಲೇಜು ಆಸ್ಪತ್ರೆ ಗಳಿವೆ. ಅಲ್ಲಿಗೆ ನಂತರ ಹಂತ ಹಂತವಾಗಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಮಾಡಲು ವ್ಯವಸ್ಥೆ ಮಾಡಲಾಗುವುದು ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಬಿ.ನಾಗೇಂದ್ರಪ್ಪ
ಸೋಂಕಿತರು ಆಸ್ಪತ್ರೆಗೆ ದಾಖಲಾದ ಚಿಕಿತ್ಸೆ ನೀಡಲು ಸಾಧ್ಯವಿದೆ. ಜಿಲಾ ಸ್ಪತ್ರೆಯಲ್ಲಿ ಬೆಡ್, ಐಸಿಯು ಸಿಗದೇ ಇರುವಸಂದರ್ಭದಲ್ಲಿ ಸೋಂಕಿತರನ್ನು ಖಾಸಗಿಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈಗಕೊರೊನಾ ಮೂರನೇ ಅಲೆ ತನ್ನ ವೇಗಹೆಚ್ಚಿಸಿಕೊಂಡಿದ್ದರೂ, ಅದಕ್ಕೆ ತಕ್ಕಂತೆ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಿದ್ಧವಿದೆ. – ವೈ.ಎಸ್.ಪಾಟೀಲ, ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಸಚಿವ ಜೆ.ಸಿ.ಮಾಧು ಸ್ವಾಮಿ ಅವರಿಗೆ ಪಾಸಿಟೀವ್ ಬಂದಿದೆ. ಅವರ ಕುಟುಂಬದವರ ಪರೀಕ್ಷೆ ಮಾಡಲಾಗಿದೆ. ಅವರಿಗೆ ಅವರ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುಣ ಮುಖರಾಗುತ್ತಿದ್ದಾರೆ. -ಡಾ.ಎಂ.ಬಿ. ನಾಗೇಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ
– ಚಿ.ನಿ.ಪುರುಷೋತ್ತಮ್