Advertisement

ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ

11:34 PM Jun 17, 2019 | Team Udayavani |

ಮಹಾನಗರ: ಪಶ್ಚಿಮ ಬಂಗಾಲದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮಂಗಳೂರಿನ ಎಲ್ಲ ಖಾಸಗಿ ಆಸ್ಪತ್ರೆಗಳು ಸೋಮವಾರ ಬಂದ್‌ ಆಚರಿಸಿದವು. ಬಂದ್‌ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ ಬಂದ್‌ ಆಗಿತ್ತು. ತುರ್ತು ಸೇವೆ ಲಭ್ಯವಿದ್ದುದರಿಂದ ರೋಗಿಗಳಿಗೆ ಹೆಚ್ಚಿನ ತೊಂದರೆ ಉಂಟಾಗಲಿಲ್ಲ.

Advertisement

ಭಾರತೀಯ ವೈದ್ಯಕೀಯ ಸಂಘದ ಕರೆಯ ಮೇರೆಗೆ ದೇಶಾದ್ಯಂತ ಸೋಮವಾರ ವೈದ್ಯರು ಪ್ರತಿಭಟನೆ ನಡೆಸಿದ್ದರು. ಸಂಘದ ಮಂಗಳೂರು ಘಟಕವೂ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಎಲ್ಲ ಖಾಸಗಿ ಕ್ಲಿನಿಕ್‌ ಮತ್ತು ಆಸ್ಪತ್ರೆಗಳಲ್ಲಿ ಬಂದ್‌ ನಡೆಸಲಾಗಿತ್ತು.

ಬಂದ್‌ ಕುರಿತು ಶನಿವಾರವೇ ಮಾಹಿತಿ ನೀಡಿದ್ದರಿಂದ ರೋಗಿಗಳಿಗೆ ಹೆಚ್ಚಿನ ಸಮಸ್ಯೆ ಆಗಲಿಲ್ಲ. ಸೋಮವಾರದ ವೈದ್ಯರ ಭೇಟಿಯನ್ನೂ ವೈದ್ಯರು ರದ್ದುಗೊಳಿಸಿದ್ದರಿಂದ ಬಂದ್‌ನಿಂದ ಅಂತಹ ರೋಗಿಗಳಿಗೆ ಸಮಸ್ಯೆ ಉಂಟಾಗಲಿಲ್ಲ. ಆದರೆ, ಬಂದ್‌ ಬಗ್ಗೆ ತಿಳಿಯದಿದ್ದವರು, ದೂರದೂರಿನ ರೋಗಿಗಳು ಹೊರ ರೋಗಿ ವಿಭಾಗದ ಚಿಕಿತ್ಸೆಗಾಗಿ ಆಗಮಿಸಿ ಬರಿಗೈಯಲ್ಲಿ ವಾಪಸ್ಸಾಗಬೇಕಾಯಿತು. ಎಲ್ಲ ಕ್ಲಿನಿಕ್‌ ಮತ್ತು ಆಸ್ಪತ್ರೆಗಳಲ್ಲಿ ಬಂದ್‌ ಬಗ್ಗೆ ಸೂಚನಫಲಕಗಳನ್ನು ಅಳವಡಿಸಲಾಗಿತ್ತು.

ಖಾಸಗಿ ಆಸ್ಪತ್ರೆಗಳು ಬಂದ್‌ ಆಚರಿಸಿದ ಹಿನ್ನೆಲೆಯಲ್ಲಿ ಸರಕಾರಿ ವೆನಾÉಕ್‌ ಆಸ್ಪತ್ರೆಯಲ್ಲಿ ಜನಸಂದಣಿ ಹೆಚ್ಚಿತ್ತು. ಸರಕಾರಿ ವೈದ್ಯರು, ನರ್ಸ್‌ಗಳ ಸೋಮವಾರದ ರಜೆಯನ್ನು ರದ್ದುಗೊಳಿಸಿ ತುರ್ತು ಹಾಜರಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ಪರದಾಟ ತಪ್ಪಿತ್ತು. ಆದರೆ ಬೆಳಗ್ಗಿನಿಂದಲೇ ವೆನಾÉಕ್‌ ಆಸ್ಪತ್ರೆಯಲ್ಲಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಔಷಧಕ್ಕಾಗಿ ಸ್ವಲ್ಪ ಕಾಯುವಂತಾಯಿತು.

ಕಪ್ಪು ಪಟ್ಟಿ ಧರಿಸಿ ಕರ್ತವ್ಯ
ಸರಕಾರಿ ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಎಂದಿಗಿಂತ ಸೋಮವಾರ ರೋಗಿಗಳ ಸಂಖ್ಯೆ ಕಡಿಮೆ ಇತ್ತು. ಪ್ರತಿ ದಿನ ಹೊರ ರೋಗಿ ವಿಭಾಗದಲ್ಲಿ 150ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದುಕೊಂಡರೆ, ಸೋಮವಾರ 65 ಮಂದಿ ಚಿಕಿತ್ಸೆ ಪಡೆದಿದ್ದರು. ಮಹಾನಗರ, ಜೂ. 17: ಪಶ್ಚಿಮ ಬಂಗಾಲದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮಂಗಳೂರಿನ ಎಲ್ಲ ಖಾಸಗಿ ಆಸ್ಪತ್ರೆಗಳು ಸೋಮವಾರ ಬಂದ್‌ ಆಚರಿಸಿದವು. ಬಂದ್‌ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ ಬಂದ್‌ ಆಗಿತ್ತು. ತುರ್ತು ಸೇವೆ ಲಭ್ಯವಿದ್ದುದರಿಂದ ರೋಗಿಗಳಿಗೆ ಹೆಚ್ಚಿನ ತೊಂದರೆ ಉಂಟಾಗಲಿಲ್ಲ.

Advertisement

ಭಾರತೀಯ ವೈದ್ಯಕೀಯ ಸಂಘದ ಕರೆಯ ಮೇರೆಗೆ ದೇಶಾದ್ಯಂತ ಸೋಮವಾರ ವೈದ್ಯರು ಪ್ರತಿಭಟನೆ ನಡೆಸಿದ್ದರು. ಸಂಘದ ಮಂಗಳೂರು ಘಟಕವೂ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಎಲ್ಲ ಖಾಸಗಿ ಕ್ಲಿನಿಕ್‌ ಮತ್ತು ಆಸ್ಪತ್ರೆಗಳಲ್ಲಿ ಬಂದ್‌ ನಡೆಸಲಾಗಿತ್ತು. ಬಂದ್‌ ಕುರಿತು ಶನಿವಾರವೇ ಮಾಹಿತಿ ನೀಡಿದ್ದರಿಂದ ರೋಗಿಗಳಿಗೆ ಹೆಚ್ಚಿನ ಸಮಸ್ಯೆ ಆಗಲಿಲ್ಲ. ಸೋಮವಾರದ ವೈದ್ಯರ ಭೇಟಿಯನ್ನೂ ವೈದ್ಯರು ರದ್ದುಗೊಳಿಸಿದ್ದರಿಂದ ಬಂದ್‌ನಿಂದ ಅಂತಹ ರೋಗಿಗಳಿಗೆ ಸಮಸ್ಯೆ ಉಂಟಾಗಲಿಲ್ಲ. ಆದರೆ, ಬಂದ್‌ ಬಗ್ಗೆ ತಿಳಿಯದಿದ್ದವರು, ದೂರದೂರಿನ ರೋಗಿಗಳು ಹೊರ ರೋಗಿ ವಿಭಾಗದ ಚಿಕಿತ್ಸೆಗಾಗಿ ಆಗಮಿಸಿ ಬರಿಗೈಯಲ್ಲಿ ವಾಪಸ್ಸಾಗಬೇಕಾಯಿತು. ಎಲ್ಲ ಕ್ಲಿನಿಕ್‌ ಮತ್ತು ಆಸ್ಪತ್ರೆಗಳಲ್ಲಿ ಬಂದ್‌ ಬಗ್ಗೆ ಸೂಚನಫಲಕಗಳನ್ನು ಅಳವಡಿಸಲಾಗಿತ್ತು.

ಖಾಸಗಿ ಆಸ್ಪತ್ರೆಗಳು ಬಂದ್‌ ಆಚರಿಸಿದ ಹಿನ್ನೆಲೆಯಲ್ಲಿ ಸರಕಾರಿ ವೆನಾÉಕ್‌ ಆಸ್ಪತ್ರೆಯಲ್ಲಿ ಜನಸಂದಣಿ ಹೆಚ್ಚಿತ್ತು. ಸರಕಾರಿ ವೈದ್ಯರು, ನರ್ಸ್‌ಗಳ ಸೋಮವಾರದ ರಜೆಯನ್ನು ರದ್ದುಗೊಳಿಸಿ ತುರ್ತು ಹಾಜರಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ರೋಗಿಗಳಿಗೆ ಚಿಕಿತ್ಸೆಗೆ ಪರದಾಟ ತಪ್ಪಿತ್ತು. ಆದರೆ ಬೆಳಗ್ಗಿನಿಂದಲೇ ವೆನಾಕ್‌ ಆಸ್ಪತ್ರೆಯಲ್ಲಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಔಷಧಕ್ಕಾಗಿ ಸ್ವಲ್ಪ ಕಾಯುವಂತಾಯಿತು.

ಕಪ್ಪು ಪಟ್ಟಿ ಧರಿಸಿ ಕರ್ತವ್ಯ
ಸರಕಾರಿ ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಎಂದಿಗಿಂತ ಸೋಮವಾರ ರೋಗಿಗಳ ಸಂಖ್ಯೆ ಕಡಿಮೆ ಇತ್ತು. ಪ್ರತಿ ದಿನ ಹೊರ ರೋಗಿ ವಿಭಾಗದಲ್ಲಿ 150ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದುಕೊಂಡರೆ, ಸೋಮವಾರ 65 ಮಂದಿ ಚಿಕಿತ್ಸೆ ಪಡೆದಿದ್ದರು. ಎರಡೂ ಆಸ್ಪತ್ರೆಗಳಲ್ಲಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಮತ್ತು ಆರೋಗ್ಯ ಸಂಸ್ಥೆಗಳ ಮೇಲಿನ ದಾಳಿ ತಡೆಯಲು ಕಾಯ್ದೆ ರೂಪಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ವತಿಯಿಂದ ನಗರದ ಐಎಂಎ ಸಭಾಂಗಣದಲ್ಲಿ ಸಾಂಕೇತಿಕ ಪ್ರತಿಭಟನ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಐಎಂಎ ಮಂಗಳೂರು ಅಧ್ಯಕ್ಷ ಡಾ| ಸಚ್ಚಿದಾನಂದ ರೈ, ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯಗಳಂತಹ ಪ್ರಕರಣ ಆಗಾಗ ಘಟಿಸುತ್ತಿವೆ. ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಈ ಬಗ್ಗೆ ಕಟ್ಟುನಿಟ್ಟಿನಲ್ಲಿ ಕಾನೂನು ತರಬೇಕು ಎಂದು ಆಗ್ರಹಿಸಿದರು.

ವೈದ್ಯರ ಪ್ರತಿಭಟನೆಯಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಆದರೆ, ಇಂತಹ ಘಟನೆಗಳು ಪದೇಪದೇ ಮರುಕಳಿಸುವುದರಿಂದ ವೈದ್ಯರಿಗೆ ಸಮಸ್ಯೆ ಜಾಸ್ತಿಯಾಗುತ್ತದೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದರು. ಮಂಗಳೂರು ಘಟಕದ ಕಾರ್ಯದರ್ಶಿ ಡಾ| ಸುಧೀಂದ್ರ ರಾವ್‌, ನಿಯೋಜಿತ ಅಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್‌, ಖಜಾಂಚಿ ಡಾ| ವಿನಯ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಮೂಲ್ಕಿಯಲ್ಲಿ ಸರಕಾರಿ ವೈದ್ಯರಿಂದ ಸಾಂಕೇತಿಕ ಮುಷ್ಕರ
ಮೂಲ್ಕಿ: ದೇಶದಾದಂತ್ಯ ಸೋಮವಾರ ನಡೆದ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಮೂಲ್ಕಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸಾಂಕೇತಿಕವಾಗಿ ಮುಷ್ಕರ ನಡೆಸಿ, ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. ಆಸ್ಪತ್ರೆಯ ಕೆಲಸದಲ್ಲಿ ಎಂದಿನಂತೆ ಕಾರ್ಯನಿರ್ವಹಿಸಿದರು. ಉಳಿದೆಡೆಗಳ ಕ್ಲಿನಿಕ್‌ಗಳಲ್ಲಿ ವೈದ್ಯರು ಸೇವೆಯಲ್ಲಿ ಭಾಗವಹಿಸದೇ ದಿನವಿಡೀ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್‌ ಹೋಮ್‌ಗಳಲ್ಲಿನ ವೈದ್ಯರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೂ, ರೋಗಿಗಳ ಚಿಕಿತ್ಸೆಗೆ ಅಗತ್ಯವಾದಾಗ ನೆರವಾಗಿದ್ದಾರೆ.

ಮೂಡುಬಿದಿರೆ: ಇಲ್ಲಿನ ಖಾಸಗಿ ಹಾಗೂ ಚಾರಿಟೇಬಲ್‌ ಆಸ್ಪತ್ರೆ, ದವಾಖಾನೆಗಳ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಆದರೆ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದ್ದು, 400- 500 ರೋಗಿಗಳು ಸರಕಾರಿ ಸೇವೆಯನ್ನು ಬಳಸಿಕೊಂಡಿದ್ದಾರೆ ಎನ್ನ ಲಾ ಗಿದೆ.
ವೈದ್ಯರು ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಬೆಂಬಲ ಸೂಚಿಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗೆ, ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸೆ ಎಂದಿನಂತೆ ನಡೆದರೆ, ಉಳಿದೆಲ್ಲ ವಿಭಾಗಗಳಲ್ಲಿ ಸೇವೆ ಸ್ಥಗಿತಗೊಳಿಸಲಾಗಿತ್ತು. ಭಾರತೀಯ ದಂತ ವೈದ್ಯರ ಸಂಘದ ಸೂಚನೆ ಬಂದಿರದ ಹಿನ್ನೆಲೆಯಲ್ಲಿ ಖಾಸಗಿ ದಂತ ವೈದ್ಯರು ಎಂದಿನಂತೆ ಕರ್ತವ್ಯದಲ್ಲಿ ನಿರತರಾಗಿದ್ದರು ಎಂದು ತಿಳಿದುಬಂದಿದೆ.

“ಐಎಂಎ’ಯಡಿ ಬರುವ ವೈದ್ಯರು, ಮಂಗ ಳೂರಿನ ಖಾಸಗಿ ಆಸ್ಪತ್ರೆಗಳ ಸಂಘದವರೊಂದಿಗೆ ನಿಕಟ ಸಂಪರ್ಕ ಹೊಂದಿರುವವರು ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದರು ಎಂದು ಮೂಡುಬಿದಿರೆಯ ಡಾಕ್ಟರ್ ಅಸೋಸಿಯೇಶನ್‌ ಅಧ್ಯಕ್ಷ ಡಾ| ವಿನಯ ಆಳ್ವ ತಿಳಿಸಿದ್ದಾರೆ.
ಹೊರ ರೋಗಿ ಸೇವೆ ಸ್ಥಗಿತ

ದೇರಳಕಟ್ಟೆ: ವೈದ್ಯರ ಮುಷ್ಕರಕ್ಕೆ ಉಳ್ಳಾಲ, ದೇರಳಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಸೋಮವಾರ ಹೊರರೋಗಿ ವಿಭಾಗದಲ್ಲಿ ವೈದ್ಯಕೀಯ ಚಿಕಿತ್ಸೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ದೆರಳಕಟ್ಟೆಯ ಕೆ.ಎಸ್‌. ಹೆಗ್ಡೆ ಚಾರಿಟೇಬಲ್‌ ಆಸ್ಪತ್ರೆ, ಯೇನೆಪೊಯ ಆಸ್ಪತ್ರೆ, ಕಣಚೂರು ಆಸ್ಪತ್ರೆ, ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಸ್ಥಗಿತಗೊಳಿಸಲಾ ಗಿ ತ್ತು. ವಾರದ ಮೊದಲ ದಿನವಾದ ಸೋಮವಾರ ಹೆಚ್ಚಿನ ಆಸ್ಪತ್ರೆಗಳಲ್ಲಿ ಕೇರಳ ಸೇರಿದಂತೆ ಹೊರ ಜಿಲ್ಲೆಗಳಿಂದ ಚಿಕಿತ್ಸೆಗೆ ಸಾವಿರಾರು ಜನರು ಆಗಮಿಸುತ್ತಿದ್ದರು. ಆದರೆ ಸೋಮವಾರದ ಪ್ರತಿಭಟನೆಯ ವಿಚಾರದಲ್ಲಿ ಮೊದಲೇ ಹೊರ ಜಿಲ್ಲೆಗಳಿಂದ ಮತ್ತು ರಾಜ್ಯಗಳಿಂದ ಆಗಮಿಸುವ ಬಸ್‌ಗಳ ಚಾಲಕರಿಗೆ ಮೊದಲೇ ಮಾಹಿತಿ ನಿಇಡಿದ್ದರಿಂದ ಚಿಕಿತ್ಸೆಗೆ ಬಂದವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಿತ್ತು.

ಉಳಕೊಳ್ಳಲು ವ್ಯವಸ್ಥೆ
ಸೊಮವಾರ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬಂದವರಿಗೆ ಉಳಕೊಳ್ಳಲಲು ವ್ಯವಸ್ಥೆ ಮಾಡಲಾಗಿದ್ದು, ಉಳಿದುಕೊಳ್ಳವವರು ಗುರುತಿನ ಚೀಟಿಯನ್ನು ಆಸ್ಪತ್ರೆಗೆ ನೀಡಿ ಒಂದು ದಿನ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪ್ರತೀ ಸೋಮವಾರ ಸುಮಾರು 2,800ಕ್ಕೂ ಹೆಚ್ಚು ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆಗೆ ನೋಂದಾಯಿಸುತ್ತಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಆಗಮಿಸುವ ಬಸ್‌ ಸೇರಿದಂತೆ ವಾಹನಗಳ ಮುಖ್ಯಸ್ಥರಿಗೆ ಮೊದಲೇ ಮಾಹಿತಿ ನೀಡಿದ್ದರಿಂದ ಇಂದು ಸಂಖ್ಯೆ ಗಣನೀಯ ಕಡಿಮೆಯಾಗಿತ್ತು. ಮಾಹಿತಿ ಇಲ್ಲದೆ ಚಿಕಿತ್ಸೆಗೆ ಆಗಮಿಸಿದ್ದ ದೂರದ ಊರಿನ ಜನರಿಗೆ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದು ಕೆ.ಎಸ್‌.ಹೆಗ್ಡೆ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್‌ ಶೆಟ್ಟಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next