Advertisement

ಕರಾವಳಿಯಲ್ಲಿ ಹೆಚ್ಚುತ್ತಿರುವ ಮಳೆ: ಪರಿಹಾರ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಸೂಚನೆ

03:09 PM Aug 02, 2022 | Team Udayavani |

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ರಾಷ್ಟ್ರಧ್ವಜ ಅಭಿಯಾನ: ಪ್ರೊಫೈಲ್ ಫೋಟೋಗಳಾಗಿ ರಾಷ್ಟ್ರಧ್ವಜ ಬಳಸಲು ಸಿಎಂ ಕರೆ

ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಮಂಕಿಪಾಕ್ಸ್ ಸೋಂಕು ನಿಯಂತ್ರಣದ ಬಗ್ಗೆಯೂ ಸಭೆ ನಡೆಸಲಾಗುವುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಐಐಎ ನ ಕಲ್ಚರಲ್ ವಿಂಗ್ ನ ಸಭೆಗಾಗಿ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next