Advertisement

ಶೋಭಾ ಸೇರಿ ಎಲ್ಲಾ 16 ಹಾಲಿ ಸಂಸದರಿಗೆ ಟಿಕೆಟ್, ಕಾದು ನೋಡಿ: ಬಿಎಸ್ ವೈ

08:34 AM Mar 13, 2019 | Team Udayavani |

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬುಧವಾರ ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉಮೇಶ್ ಜಾಧವ್ ರೀತಿಯಲ್ಲಿಯೇ ಇನ್ನೂ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎರಡು, ಮೂರು ದಿನ ಕಾದು ನೋಡಿ ಎಂದು ಈ ಸಂದರ್ಭದಲ್ಲಿ ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲವನ್ನೂ ಈಗಲೇ ಹೇಳಲ್ಲ. ಕಾದು ನೋಡಿ ನಿಮಗೆ ಗೊತ್ತಾಗುತ್ತದೆ ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಶೋಭಾ ಕರಂದ್ಲಾಜೆ ಸೇರಿದಂತೆ ಬಹುತೇಕ 16 ಹಾಲಿ ಸಂಸದರಿಗೆ ಟಿಕೆಟ್ ಖಚಿತ ಎಂದು ಪರೋಕ್ಷವಾಗಿ ಹೇಳಿದಂತಾಗಿದ್ದು, ಉಳಿದ 12 ಕ್ಷೇತ್ರಗಳಲ್ಲಿ ಬಿಜೆಪಿ ಕಾದು ನೋಡುವ ತಂತ್ರದ ಮೊರೆ ಹೋಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next