Advertisement

ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯ ರೂಢಿಸಿಕೊಳ್ಳಿ

06:08 PM Jul 28, 2022 | Team Udayavani |

ಚಾಮರಾಜನಗರ: ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಪರಸ್ಪರ ಸ್ನೇಹ ಸೌಹಾರ್ದತೆಯಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು. ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ, ಸರ್ಕಾರಿ ಪ್ರಥಮ ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ, ಎನ್‌.ಎಸ್‌.ಎಸ್‌. ಮತ್ತು ಅಭಿವ್ಯಕ್ತಿ ವೇದಿಕೆಗಳ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಸಂಭ್ರಮಾಚರಣೆ ಅಂಗವಾಗಿ
ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಮಾತನಾಡಿದರು.

Advertisement

ಭಾರತವು ಸರ್ವಧರ್ಮಗಳ ರಾಷ್ಟ್ರವಾಗಿದ್ದು ಸಂಸ್ಕೃತಿ, ಕಲೆ, ಪರಂಪರೆ, ಜಾತಿ ಧರ್ಮಗಳನ್ನು ಒಗ್ಗೂಡಿಸುವ ಶಕ್ತಿ ಹೊಂದಿದೆ. ಭೇದವನ್ನು ಮರೆತು ಸಾಮರಸ್ಯದಿಂದ ಇರುವುದನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಾಲೆ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯ ಕ್ರಮಗಳಿಂದ ಸಮನ್ವಯ ಮನೋ ಭಾವನೆ ಬೆಳೆಯುತ್ತದೆ ಎಂದು ಅಭಿಪ್ರಾಯ ಪಟ್ಟರು.

ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಬೇಕು. ಚಾಮರಾಜನಗರ ಜಿಲ್ಲೆಯು ಜನಪದ ಕಲೆಗಳ ತವರೂರಾಗಿದ್ದು ಕಲೆ ಸಂಸ್ಕೃತಿಯಲ್ಲಿ ಶ್ರೀಮಂತವಾಗಿದ್ದು, ಇದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ತೊಡಗಿ: ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸಿಲಿಕಾನ್‌ ಕಂಟ್ರೋಲ್ಸ್‌ನ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌. ರಾಘವೇಂದ್ರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಉತ್ತಮ ಅಂಕಗಳಿಸಿ ಶೈಕ್ಷಣಿಕವಾಗಿ ಹೆಚ್ಚು ಸಾಧನೆ ಮಾಡುತ್ತಿರುವುದು ಗಮನಾರ್ಹ ಹಾಗೂ ಶ್ಲಾಘನೀಯ. ಶಿಕ್ಷಕರು, ಬೋಧಕರು ವಿದ್ಯಾರ್ಥಿಗಳಿಗೆ ಆತ್ಮಸ್ಥೆçರ್ಯ ಹೆಚ್ಚಿಸುವಂತಹ
ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದರು.

ವಿದ್ಯಾರ್ಥಿ ನಂತರದ ಜೀವನದಲ್ಲಿ ಸರ್ಕಾರಿ ಕೆಲಸಗಳನ್ನಷ್ಟೇ ಅಪೇಕ್ಷಿಸಬಾರದು. ಸ್ವ ಉದ್ಯೋಗ ಪ್ರಾರಂಭಿಸುವಂತಹ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಯಶಸ್ಸಿಗೆ ಯಾವುದೇ ಅಡ್ಡದಾರಿ ಇರುವುದಿಲ್ಲ ಕೇವಲ ನಿರಂತರ ಪರಿಶ್ರಮದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಿಂಜರಿಕೆ ಮನೋಭಾವವನ್ನು ತೊಡೆದು ಹಾಕಬೇಕು ಎಂದು ಕಿವಿಮಾತು ಹೇಳಿದರು.

Advertisement

ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ: ಮೈಸೂರಿನ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಡಾ. ಎಂ.ಎಸ್‌. ಗಿರಿಧರ್‌ ರಾವ್‌ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಈ ವೇದಿಕೆ ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ. ಪಠ್ಯೇತರ ಚಟುವಟಿಕೆಗಳ ಜೊತೆಗೆ ಸಮಾಜದ ನೋವುಗಳಿಗೆ ಸ್ಪಂದಿಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಶಿಸ್ತನ್ನು ಮೈಗೂಡಿಸಿಕೊಳ್ಳಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ವಿಶೇಷಾಧಿಕಾರಿ ಡಾ.ಹೇಮಚಂದ್ರ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜು ವಿದ್ಯಾಭ್ಯಾಸದ ವಯಸ್ಸಿನಲ್ಲಿ ಗ್ರಹಿಸುವ ಶಕ್ತಿ ಹೆಚ್ಚಾಗಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ವಿಚಾರಗಳನ್ನು ತಾಳ್ಮೆಯಿಂದ ಕೇಳುವಿಕೆ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಸಕ್ತಿಯಿಂದ ಕೇಳಿದರೆ ನೆನಪಿನಲ್ಲಿರುತ್ತದೆ ಇನ್ನೊಬ್ಬರ ಒತ್ತಡದಿಂದ ಕೇಳಿದರೆ ಅದು ನೆನಪಿನಲ್ಲಿ ಉಳಿಯುವುದಿಲ್ಲ ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ. ದೇವರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೊ›. ಶಂಕನಪುರ ಮಹದೇವ, ಸಿಂಡಿಕೇಟ್‌ ಸದಸ್ಯರಾದ ಪ್ರದೀಪ್‌  ಕುಮಾರ್‌ ದೀಕ್ಷಿತ್‌, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಎಂ. ಆರ್‌. ಸುಮತಿ, ಅಭಿವ್ಯಕ್ತಿ ವೇದಿಕೆ ಸಂಚಾಲಕಿ ಎಸ್‌. ಚಂದ್ರಮ್ಮ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಡಾ. ಎನ್‌.ಜೆ. ಶಶಿಕಲಾ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಚಾಲಕ ಡಾ. ಎಂ.ಎಸ್‌. ಮಂಜುನಾಥ, ಎಂ. ಚಂದ್ರಕಲಾ, ವೆಂಕಟೇಶ್‌, ಶಿವಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next