Advertisement

ಇಂಡೋ- ಆಸೀಸ್ ಕದನ: ಟಾಸ್ ಗೆದ್ದ ಆಸ್ಟ್ರೇಲಿಯಾ; ರಾಹುಲ್- ಧವನ್ ಇಬ್ಬರಿಗೂ ಸ್ಥಾನ

10:00 AM Jan 15, 2020 | keerthan |

ಮುಂಬೈ: ವಿಶ್ವ ಕ್ರಿಕೆಟ್ ನ ಬಲಿಷ್ಠ ತಂಡಗಳ ಏಕದಿನ ಕಾದಾಟಕ್ಕೆ ಮುಂಬೈನ ವಾಂಖೇಡೆ ಕ್ರೀಡಾಂಗಣ ಸಜ್ಜಾಗಿದೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಪ್ರಥಮ ಏಕದಿನ ಪಂದ್ಯ ನಡೆಯಲಿದೆ.

Advertisement

ವಾಂಖೆಡೆಯಲ್ಲಿ ಟಾಸ್ ಗೆದ್ದ ಆಸೀಸ್ ಬೌಲಿಂಗ್ ಆಯ್ಕೆ ಮಾಡಿದೆ. ಭಾರತ ತಂಡಲ್ಲಿ ರಾಹುಲ್- ಧವನ್ ಇಬ್ಬರಿಗೂ ಸ್ಥಾನ ನೀಡಲಾಗಿದೆ. ಧವನ್ ಮತ್ತು ರೋಹಿತ್ ಆರಂಭಿಕರಾಗಿ ಕಾಣಿಸಿಕೊಂಡರೆ, ಕೆ ಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ.

ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರಾ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಅರೋನ್ ಫಿಂಚ್, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಆಶ್ಟನ್ ಟರ್ನರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ ಸನ್, ಆಡಂ ಜಾಂಪಾ.

Advertisement

Udayavani is now on Telegram. Click here to join our channel and stay updated with the latest news.

Next