Advertisement

Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

10:45 PM Oct 11, 2024 | Team Udayavani |

ಹೊಸದಿಲ್ಲಿ: ನ್ಯೂಜಿ ಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಶುಕ್ರವಾರ(ಅ11) ಬಿಸಿಸಿಐ ಪ್ರಕಟಿಸಿದೆ.

Advertisement

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ಮೊಹಮ್ಮದ್. ಸಿರಾಜ್, ಆಕಾಶ್ ದೀಪ್

ಪ್ರಯಾಣ ಮೀಸಲು ಆಟಗಾರರಾಗಿ ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ಮಯಾಂಕ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.

ಕಾನ್ಪುರದಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಭಾರತ ಗೆಲುವು ಸಾಧಿಸಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಗಟ್ಟಿಗೊಳಿಸಿದೆ. ಅದರ ಉಳಿದ ಎಂಟು ಟೆಸ್ಟ್‌ಗಳಲ್ಲಿ ಒಂದನ್ನು ಗೆಲ್ಲುವುದರಿಂದ ಅದರ ಶೇಕಡಾವಾರು 85.09% ಕ್ಕೆ ಏರಿಕೆಯಾಗುತ್ತದೆ.

ಪಂದ್ಯಗಳ ದಿನಾಂಕ
1 ನೇ ಟೆಸ್ಟ್ – ಅಕ್ಟೋಬರ್ 16 ಕ್ಕೆ ಆರಂಭ, ಎಂ. ಚಿನ್ನಸ್ವಾಮಿ ಕ್ರೀಡಾಂಗಣ (ಬೆಂಗಳೂರು)
2 ನೇ ಟೆಸ್ಟ್ – ಅಕ್ಟೋಬರ್ 24 ರಿಂದ, ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ (ಪುಣೆ)
3 ನೇ ಟೆಸ್ಟ್ – ನವೆಂಬರ್ 01 ರಿಂದ, ವಾಂಖೆಡೆ ಸ್ಟೇಡಿಯಂ (ಮುಂಬೈ)

Advertisement
Advertisement

Udayavani is now on Telegram. Click here to join our channel and stay updated with the latest news.

Next