Advertisement

IND vs ZIM T20: ಸತತ ನಾಲ್ಕು ಪಂದ್ಯ ಗೆದ್ದ ಭಾರತ, 4-1ರಲ್ಲಿ ಸರಣಿ ಕೈ ವಶ

10:51 PM Jul 14, 2024 | Team Udayavani |

ಹರಾರೆ: ಸಂಜು ಸ್ಯಾಮ್ಸನ್​ (55) ಬಾರಿಸಿದ ಅಮೋಘ ಅರ್ಧ ಶತಕ ಹಾಗೂ 4 ವಿಕೆಟ್​ ಕಬಳಿಸಿ ಮಿಂಚಿದ ಮುಕೇಶ್ ಕುಮಾರ್ ನೆರವಿನಿಂದ ಭಾರತ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಐದನೇ ಪಂದ್ಯದಲ್ಲೂ ವಿಜಯ ಸಾಧಿಸಿದೆ.

Advertisement

ಮೊದಲ ಪಂದ್ಯದಲ್ಲಿ ಅಚ್ಚರಿಯ ಸೋಲು ಕಂಡದ್ದರಿಂದ ಶುಭಮನ್‌​ ಗಿಲ್ ನೇತೃತ್ವದ ಬಳಗ ಕ್ಲೀನ್ ಸ್ವೀಪ್ ಮಾಡುವ ಅವಕಾಶ ಕಳೆದುಕೊಂಡಿತು. ಆ ಬಳಿಕ ಭಾರತ ತಂಡ ಸತತ ಗೆಲುವು ಸಾಧಿಸಿ ಸರಣಿಯನ್ನು 4-1 ಅಂತರದಿಂದ ತನ್ನದಾಗಿಸಿದೆ. ಇಲ್ಲಿನ ಹರಾರೆ ಸ್ಪೋರ್ಟ್ಸ್​ ಕ್ಲಬ್​ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್​ ಸೋತ ಜಿಂಬಾಬ್ವೆ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 167 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಜಿಂಬಾಬ್ವೆ 18.3 ಓವರ್​ಗಳಲ್ಲಿ 125 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಭಾರತ ತಂಡಕ್ಕೆ ಆರಂಭಿಕ ಆಘಾತ: 
ಮೊದಲು ಬ್ಯಾಟ್ ಮಾಡಿದ ಭಾರತ ತಂಡ 12 ರನ್​ಗಳಿಗೆ ಯಶಸ್ವಿ ಜೈಸ್ವಾಲ್ ಔಟಾಗುವ ಮೂಲಕ ಆರಂಭಿಕ ಹಿನ್ನಡೆಗೆ ಒಳಗಾಯಿತು. ಜತೆಗೆ ಶುಭ್​ಮನ್ ಗಿಲ್​ ಕೂಡ 13 ರನ್​ಗೆ ಸೀಮಿತಗೊಂಡರು. ನಂತರದಲ್ಲಿ ಅಭಿಷೇಕ್ ಶರ್ಮಾ 14 ರನ್​ಗೆ ಔಟಾಗುವ ಮೂಲಕ 40 ರನ್​ಗಳಿಗೆ 3 ವಿಕೆಟ್ ನಷ್ಟ ಮಾಡಿಕೊಂಡಿತು.

ಆದರೆ ಆ ಬಳಿಕ ಆಡಲು ಬಂದ ಸಂಜು ಸ್ಯಾಮ್ಸನ್ (58) ಹಾಗೂ ರಿಯಾನ್ ಪರಾಗ್​ (22) ತಂಡವನ್ನು ಆರಂಭಿಕ ಆಘಾತದಿಂದ ಕಾಪಾಡಿದರು. ಇವರಿಬ್ಬರೂ ಸೇರಿ ತಂಡದ ಮೊತ್ತವನ್ನು 105 ರನ್​ಗಳಿಗೆ ಕೊಂಡೊಯ್ದರು. ಬಳಿಕ ಶಿವಂ ದುಬೆ 12 ಎಸೆತಕ್ಕೆ 26 ರನ್ ಬಾರಿಸಿ ಮಿಂಚಿದರು. ಅವರು ಅಮೋಘ ಎರಡು ಸಿಕ್ಸರ್ ಹಾಗೂ ಅಷ್ಟೇ ಬೌಂಡರಿ ಬಾರಿಸಿದರು. ಸಂಕಷ್ಟದಲ್ಲಿದ್ದ ವೇಳೆ ಬ್ಯಾಟ್ ಮಾಡಲು ಬಂದ ಸಂಜು ಸ್ಯಾಮ್ಸನ್​ ನಿಧಾನವಾಗಿ ಇನಿಂಗ್ಸ್ ಕಟ್ಟಿದರು. 39 ಎಸೆತಕ್ಕೆ ಅರ್ಧ ಶತಕ ಬಾರಿಸಿದ ಅವರು 45ಎಸೆತಕ್ಕೆ 58 ರನ್ ಬಾರಿಸಿ ಔಟಾದರು. ಅವರ ಇನಿಂಗ್ಸ್​ನಲ್ಲಿ 4 ಸಿಕ್ಸರ್ ಹಾಗೂ ಒಂದು ಫೋರ್ ಸೇರಿದ್ದವು. ರಿಂಕು ಸಿಂಗ್​ 9 ಎಸೆತಕ್ಕೆ 11 ರನ್​ ಬಾರಿಸಿದ್ದಾರೆ.

Advertisement

ಬೌಲರ್​ಗಳ ಅಬ್ಬರ
ಭಾರತ ನೀಡಿದ ಸ್ಪರ್ಧಾತ್ಮಕ ಮೊತ್ತದ  ಗುರಿ ಬೆನ್ನಟ್ಟಿದ ಜಿಂಬಾಬ್ವೆ  15 ರನ್​ಗೆ 2 ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಬಿತ್ತು. ಬಳಿಕ ಡಿಯೋನ್​ ಮೈರ್ಸ್​ 34 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಲ್ಲದೆ ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಬಾರಿಸಿದ್ದು ಹೊರತುಪಡಿಸಿದರೆ ಜಿಂಬಾಬ್ವೆ ತಂಡದಿಂದ ಹೆಚ್ಚು ಪ್ರತಿರೋಧ ಬರಲಿಲ್ಲ. ಇನ್ನೂ 9 ಎಸೆತಗಳು ಇರುವಂತೆಯೇ ಆಲ್​ಔಟ್​ ಆಯಿತು. ಭಾರತ ಪರ ಬೌಲಿಂಗ್​ನಲ್ಲಿ ಮುಕೇಶ್ ಕುಮಾರ್​ 22 ರನ್​ಗಳಿಎ 4 ವಿಕೆಟ್​ ಉರುಳಿಸಿದರೆ ಶಿವಂ ದುಬೆ 2 ವಿಕೆಟ್ ತಮ್ಮದಾಗಿಸಿಕೊಂಡರು.

ಪಂದ್ಯಶ್ರೇಷ್ಠ: ಶಿವಂ ದುಬೆ

ಸರಣಿ ಶ್ರೇಷ್ಠ:  ವಾಷಿಂಗ್ಟನ್‌ ಸುಂದರ್‌

 

Advertisement

Udayavani is now on Telegram. Click here to join our channel and stay updated with the latest news.

Next