Advertisement

ಮಕ್ಕಳೊಂದಿಗೆ ಅಸಭ್ಯ ವರ್ತನೆ: ಇಬ್ಬರು ತಳ್ಳುಗಾಡಿ ವ್ಯಾಪಾರಿಗಳ ಬಂಧನ

10:00 PM Aug 06, 2023 | Team Udayavani |

ಮಂಗಳೂರು: ನಗರದ ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

Advertisement

ಅಮರ್‌ ಮತ್ತು ಸೂರಜ್‌ ಬಂಧಿತ ಆರೋಪಿಗಳು. ಶನಿವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಈ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದರು. ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುತ್ತಾರೆ ಎಂದು ತಿಳಿಸಿದ್ದರು.

ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರ ಕೇಂದ್ರ ವಿಭಾಗದ ಎಸಿಪಿ ಮಹೇಶ್‌ ಕುಮಾರ್‌ ನೇತೃತ್ವದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಲೋಕೇಶ್‌ ಎ.ಸಿ. ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next