ಯುತ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ, ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸಿ ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿವೆ.
Advertisement
ಪಂಚಾಯತ್‌ಗಳ ಜನಸಂಖ್ಯೆ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ. ಆದರೆ ಸಿಬಂದಿ ಸಂಖ್ಯೆ ಮಾತ್ರ 30 ವರ್ಷಗಳ ಹಿಂದಿನ ಜನಸಂಖ್ಯೆಯ ಅನುಪಾತದಲ್ಲಿದೆ. ಸಿಬಂದಿ ಕೊರತೆಯಿಂದ ಹೆಚ್ಚುವರಿ ಹೊರೆ ಬೀಳುತ್ತಿದೆ. ದಿನದಿಂದ ದಿನಕ್ಕೆ ಕೆಲಸದ ಒತ್ತಡ ತೀವ್ರಗೊಳ್ಳುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕಾರ್ಯದರ್ಶಿ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸುವಾಗ ಪಿಡಿಒಗಳ ಸಲಹೆ ಗಳನ್ನು ಪರಿಗಣಿ ಸದೆ ಅಳವಡಿಸ ಲಾದ ಅವೈಜ್ಞಾನಿಕ ನಿಯಮ ಕೈಬಿಡ ಬೇಕು. ಕುಂದುಕೊರತೆ ಪ್ರಾಧಿಕಾರ ವನ್ನು ಚುರುಕುಗೊಳಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರಕಾರ ವಿಫಲವಾ ದರೆ ಹೋರಾಟ ತೀವ್ರ ಗೊಳಿಸುವುದಾಗಿ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ.