Advertisement
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮುಷ್ಕರದ ನಡೆಸುವ ಹಾಗೂ ಉದ್ದೇಶದ ವಿವರ ನೀಡಿದ ಅವರು, ಈಗಾಗಲೇ ಸಂಘದ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಮಾ.1ರಿಂದ ಅನಿರ್ಧಿಷ್ಟ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದರು.
Related Articles
Advertisement
ಆದರೆ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ಸಂಘದ ಸಭೆಯಲ್ಲಿ ಸರ್ಕಾರದ ವರ್ತನೆ ವಿರೋಧಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಒಕ್ಕೋರಲಿನಿಂದ ಸಮ್ಮತಿಸಿದೆ ಎಂದರು.
ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನವೇ ಬೇಡಿಕೆ ಈಡೇರಿಸುವ ಕುರಿತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರು ಮಾ.1 ರಿಂದ ಅನಿರ್ಧಿಷ್ಟ ಅವಧಿ ವರೆಗೆ ಕರ್ತವ್ಯಕ್ಕೆ ಗೈರಾಗಲು ನಿರ್ಧರಿಸಲಾಗಿದೆ ಎಂದರು.
ಇದನ್ನೂ ಓದಿ:ಭಾರತ ವಿರುದ್ಧದ ಏಕದಿನ ಸರಣಿಗೆ ಆಸೀಸ್ ತಂಡ ಪ್ರಕಟ; ಮ್ಯಾಕ್ಸ್’ವೆಲ್, ಮಾರ್ಶ್ ಕಮ್’ಬ್ಯಾಕ್
ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 2022 ಜುಲೈ 1 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹವಾಗಿದ್ದು, 6 ನೇ ವೇತನ ಆಯೋಗದ ಮಾದರಿಯಂತೆ 7 ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿ ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲೇ 2022 ಜುಲೈ 1 ರಿಂದ ಜಾರಿಗೆ ಬರುವಂತೆ ಶೇ. 40 ಫಿಟ್ ಮೆಂಟ್ ಸೌಲಭ್ಯ ಕಲ್ಪಿಸಿ ಸರ್ಕಾರಿ ಆದೇಶ ಹೊರಡಿಸಬೇಕು.
ರಾಜ್ಯದ ಪಿಂಷಣಿ ಹೊಸ ಯೋಜನಾ ವ್ಯಾಪ್ತಿಯ ನೌಕರರನ್ನು ಪಿಂಚಣಿ ಹೊಸ ಯೋಜನೆ ವ್ಯಾಪ್ತಿಗೆ ತರಬೇಕು. ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ, ಜಾರ್ಖಂಡ, ಹಿಮಾಚಲ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆ ಕರ್ನಾಟಕದಲ್ಲೂ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಹ.ಧೈವಾಡಿ ಮಾತನಾಡಿ, ನೌಕರರ ಬೇಡಿಕೆ ನ್ಯಾಯಾಮ್ಮತವಾಗಿದ್ದು, ನಮ್ಮ ಸಂಘದ ಅಧೀನತೆ ಹೊಂದಿರುವ 40 ಸಂಘಟನೆಗಳು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಲಿವೆ ಎಂದರು.
ಸಂಘಟನೆತ ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಸೈಯದ ಜುಬೇರ ಕೆರೂರ, ವಿಶ್ವನಾಥ ಬೆಳ್ಳೆನ್ನವರ, ಗಂಗಾಧರ ಜೇವೂರ, ಶಿವರಾಜ ಬಿರಾದಾರ, ಸುರೇಶ ಅಂಬಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.