ಲಕ್ನೋ: ಈ ಬಾರಿಯ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ರಜೆಯನ್ನು ಉತ್ತರಪ್ರದೇಶ ಸರ್ಕಾರ ರದ್ದುಗೊಳಿಸಿದ್ದು, ಆಗಸ್ಟ್ 15ರಂದು ಎಲ್ಲಾ ಶಾಲಾ, ಕಾಲೇಜು, ಯೂನಿರ್ವಸಿಟಿಗಳು ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ರಾಜ್ಯಾದ್ಯಂತ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಶುಕ್ರವಾರ(ಜುಲೈ 15) ಘೋಷಿಸಿದೆ.
ಇದನ್ನೂ ಓದಿ:ಚೆನ್ನೈ: ಹಿರಿಯ ನಟ ಪ್ರತಾಪ್ ಪೋತೆನ್ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ!
ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಯನ್ನು ಪ್ರತಿ ಜಿಲ್ಲೆಯಲ್ಲೂ ವಿಶೇಷ ಕಾರ್ಯಕ್ರಮಗಳ ಮೂಲಕ ಆಚರಿಸಬೇಕಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ದೀಪಾವಳಿ ಹಬ್ಬದಂತೆ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಈ ಮೂಲಕ ಇದನ್ನು ರಾಷ್ಟ್ರೀಯ ಜನಾಂದೋಲನವನ್ನಾಗಿ ಮಾಡಬೇಕಾಗಿದೆ ಎಂದು ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿ ಡಿ.ಎಸ್.ಮಿಶ್ರಾ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ಸಂಬಂಧಿಸಿದ ಊರುಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ವಾರದಲ್ಲಿ ಪ್ರತಿ ದಿನ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು. ಇದೊಂದು ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ಜನರೂ ಕೂಡಾ ಭಾಗವಹಿಸಬೇಕಾಗಿದೆ ಎಂದು ಮಿಶ್ರಾ ಮನವಿ ಮಾಡಿಕೊಂಡಿದ್ದಾರೆ.