Advertisement

“ಅಮೃತ ಸರೋವರ’ಗಳಲ್ಲಿ ಸ್ವಾತಂತ್ರ್ಯೋತ್ಸವ!

01:28 AM Jun 26, 2022 | Team Udayavani |

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲು ಜಿಲ್ಲಾಡಳಿತ, ಜಿ.ಪಂ. ಸಿದ್ಧತೆ ಮಾಡಿಕೊಳ್ಳುತ್ತಿವೆ.

Advertisement

ಆಗಸ್ಟ್‌ 11ರಿಂದ 15ರ ವರೆಗೆ ಮನೆ-ಮನೆಯ ಮೇಲೂ ರಾಷ್ಟ್ರಧ್ವಜ ಹಾರಿ ಸಲು ಈಗಾಗಲೇ ಗ್ರಾಮೀಣಾಭಿ ವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ನಿರ್ದೇಶನ ನೀಡಿವೆ. ಈ ನಿಟ್ಟಿನಲ್ಲಿ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ತಯಾರಿ ಆಗುತ್ತದೆ. ವಿವಿಧ ಸಂಘ-ಸಂಸ್ಥೆಗಳು, ಶಾಲೆ ಕಾಲೇಜುಗಳು, ಸಾರ್ವಜನಿ ಕರ ಸಹಕಾರವನ್ನು ಪಡೆದು ಕೊಳ್ಳಲಾಗುತ್ತಿದೆ.

75 ಕೆರೆ ಅಭಿವೃದ್ಧಿ
ಕೇಂದ್ರ ಸರಕಾರದ ಅಮೃತ ಸರೋವರ ಯೋಜನೆಯಡಿ ಜಿಲ್ಲೆಯ 75 ಕೆರೆಗಳನ್ನು ಅಭಿವೃದ್ಧಿಗೊಳಿಸಲಿದ್ದು, ಒಂದು ಎಕರೆ ವಿಸ್ತೀರ್ಣದ ಕೆರೆ, ಕಲ್ಯಾಣಿಗಳನ್ನು ಗುರುತಿಸಲಾಗುತ್ತಿದೆ. ಆಗಸ್ಟ್‌ 15ರ ಒಳಗೆ ಕನಿಷ್ಠ 15 ಕೆರೆಗಳನ್ನು ಅಭಿವೃದ್ಧಿಪಡಿಸುವುದು ಒಂದು ಭಾಗವಾದರೆ, ಗುರುತಿಸಿರುವ 75 ಕೆರೆಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ. ಇದಕ್ಕೆ ಪೂರಕ ವಾಗಿ ಸಂಬಂಧಪಟ್ಟ ಗ್ರಾ.ಪಂ.ಗಳಿಗೂ ಶೀಘ್ರ ನಿರ್ದೇಶನವೂ ಹೋಗಲಿದೆ.

ಇನ್ನಷ್ಟು ಕಾರ್ಯಕ್ರಮಕ್ಕೆ ರೂಪರೇಖೆ
ಸ್ವಾತಂತ್ರ್ಯದ ಅಮೃತ ಮಹೋತ್ಸ ವದ ಹಿನ್ನೆಲೆಯಲ್ಲಿ ಹೊಸ ಹೊಸ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಯೋಚನೆ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಏಕರೂಪ ಕಾರ್ಯಕ್ರಮ ನಡೆಸುವ ಬಗ್ಗೆಯೂ ಚಿಂತನೆಯಾಗುತ್ತಿದೆ. ಸಾಧಕರನ್ನು ಸಮ್ಮಾ ನಿಸುವುದು, ಸ್ವಾತಂತ್ರ್ಯಕ್ಕೆ ಪ್ರೇರಣೆ ನೀಡಿದ ಸ್ಥಳಗಳ ಸ್ಮರಣೆ ಸಹಿತ ವಿನೂತನವಾಗಿ ಕಾರ್ಯಕ್ರಮ ನಡೆಸುವ ಬಗ್ಗೆ ರೂಪರೇಖೆ ಸಿದ್ಧವಾಗುತ್ತಿದೆ.

ಸಭೆಯಲ್ಲಿ ತೀರ್ಮಾನ
ಜಿಲ್ಲೆಯಲ್ಲಿ ವಿನೂತನವಾಗಿ ಯಾವ ಕಾರ್ಯಕ್ರಮ ನಡೆಸಬೇಕು ಎಂಬ ನಿರ್ಧಾರ ಇನ್ನೂ ಆಗಿಲ್ಲ. ಜುಲೈಯಲ್ಲಿ ಪೂರ್ವಸಿದ್ಧತೆ ಸಭೆ ನಡೆಸಿ ನಿರ್ಧಾರ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ.

Advertisement

ಕೇಂದ್ರ ಸರಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಮೃತ ಸರೋವರ ಯೋಜನೆಯಡಿ 75 ಕೆರೆಗಳನ್ನು ಗುರುತಿಸಿ, ಅಭಿವೃದ್ಧಿಪಡಿಸಲಾಗುವುದು. ಆಗಸ್ಟ್‌ 15ರೊಳಗೆ 15 ಕೆರೆಗೆಳನ್ನು ಅಭಿವೃದ್ಧಿಪಡಿಸಿ, ಗುರುತಿಸಿರುವ 75 ಕೆ‌ರೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದೇವೆ.
– ಪ್ರಸನ್ನ ಎಚ್‌.,
ಜಿ.ಪಂ. ಸಿಇಒ, ಉಡುಪಿ

Advertisement

Udayavani is now on Telegram. Click here to join our channel and stay updated with the latest news.

Next