Advertisement

ಗೋವಾ: ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಸಿಎಂ ಸಾವಂತ್

02:26 PM Aug 15, 2022 | Team Udayavani |

ಪಣಜಿ: ಗೋವಾ ರಾಜ್ಯದಲ್ಲಿನ ವಿವಿಧ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

Advertisement

ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು  ಪಣಜಿಯ ಹಳೆಯ ಸಚಿವಾಲಯದ ಮುಂದೆ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದ ಮಾತನಾಡಿದರು.

ಗೋವಾ ರಾಜ್ಯದ ಗಣಿಗಾರಿಕೆ ಕುರಿತು  ಮುಖ್ಯಮಂತ್ರಿ ಸಾವಂತ್ ಮಾತನಾಡಿ, 2018 ರಲ್ಲಿ ಸುಪ್ರೀಂ ಕೋರ್ಟ್‍ನಿಂದ ಗಣಿಗಳ ನವೀಕರಣವನ್ನು ರದ್ದುಗೊಳಿಸಿದ 88 ಗಣಿ ಲೀಸ್‍ಗಳನ್ನು  ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಜ್ಜಾಗಿದೆ ಮತ್ತು ಇತರ ಗುತ್ತಿಗೆಗಳ ಇ-ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಜ್ಜಾಗಿದೆ.ಮುಂದಿನ 4 ರಿಂದ 6 ತಿಂಗಳಲ್ಲಿ ಹರಾಜಿನ ಮೂಲಕ ರಾಜ್ಯದಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ಸರ್ಕಾರ ಪುನರಾರಂಭಿಸಲಿದೆ ಎಂದು ಹೇಳಿದರು.

ಗೋವಾವನ್ನು ಭಾರತದ ಪ್ರವಾಸೋದ್ಯಮ ರಾಜಧಾನಿಯನ್ನಾಗಿ ಮಾಡುವ ಗುರಿಯನ್ನು ಸಾಧಿಸಲು ನಮ್ಮ  ಸರ್ಕಾರವು ಕೆಲಸ ಮಾಡುತ್ತಿದೆ. ರಸ್ತೆ, ನೀರು ಮತ್ತು ವಿದ್ಯುತ್ ಸಂಪರ್ಕಕ್ಕಾಗಿ ತಮ್ಮ ಸರ್ಕಾರ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂದು ಸಾವಂತ್ ಮಾಹಿತಿ ನೀಡಿದರು.

ಇದನ್ನೂ ಓದಿ: ವಿಶ್ವದ ಅತೀ ಎತ್ತರದ ಸೇತುವೆ ಮೇಲೆ ಹಾರಿದ ರಾಷ್ಟ್ರಧ್ವಜ

Advertisement

ಗೋವಾ ರಾಜ್ಯಕ್ಕೆ ಬಂದಿಳಿಯುವ ವಿಮಾನಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ನಿರೀಕ್ಷೆಯಿರುವ ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಅಕ್ಟೋಬರ್ 2022 ರಲ್ಲಿ ಕಾರ್ಯಾರಂಭ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‍ ನಲ್ಲಿ ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.

ಧ್ವಜಾರೋಹಣ ನೆರವೇರಿಸಿದ ನಂತರ ಮುಖ್ಯಮಂತ್ರಿಗಳು ಪೋಲಿಸ್ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ತಮ್ಮ ಸೇವಾ ಕಾರ್ಯದಲ್ಲಿ ಉತ್ತಮ ಸಾಧನೆಗೈದ ಹಿರಿಯ ಪೋಲಿಸ್ ಅಧಿಕಾರಿಗಳಿಗೆ ಸೇವಾ ಪದಕ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು, ಸಚಿವರು, ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next