ಕಲಬುರಗಿ: ಜಿಲ್ಲಾಧಿಕಾರಿ ಆರ್ ವೆಂಕಟೇಶ್ವರ ಕುಮಾರ ಅವರು ದೇಶದ 73ನೇ ಸ್ವಾತಂತ್ರ್ಯತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಸಂಸದ ಡಾ.ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನುರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಸೇರಿದಂತೆ ಮುಂತಾದವರಿದ್ದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಭೀಮಾ ಪ್ರವಾಹದಿಂದ ಕಲಬುರಗಿ ಜಿಲ್ಲೆಯಲ್ಲಿ ನದಿ ಅಕ್ಕಪಕ್ಕದ ಮೂರು ಸಾವಿರ ಹೆಕ್ಟೇರ್ ಭೂಮಿಯ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶಕುಮಾರ ಹೇಳಿದರು. ಈ ಮೂರು ಸಾವಿರ ಹೆಕ್ಟೇರ್ ಭೂಮಿಗೆ ಕೇಂದ್ರದ 3800 ಹಾಗೂ ರಾಜ್ಯ ಸರ್ಕಾರದಿಂದ 6000 ರೂ. ನೀಡಲಾಗುವುದು ಎಂದು ತಿಳಿಸಿದರು.
ಪ್ರಧಾನಮಂತ್ರಿ ಕಿಸಾನ ಸಮ್ಮಾನ ಯೋಜನೆ ಅಡಿ ಜಿಲ್ಲೆಯಲ್ಲಿ2.70ಲಕ್ಷ ರೈತರು ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಿದ್ದು, ಇದರಲ್ಲಿ 88000ರೈತರಿಗೆ ಮೊದಲನೇ ಕಂತಿನ 2000 ರೂ ಜಮಾ ಮಾಡಲಾಗಿದೆ. ಅದೇ ರೀತಿ ಜಿಲ್ಲೆಯಲ್ಲಿ ಶೇ 90 ರಷ್ಟು ಬೆಳೆ ಸಮೀಕ್ಷೆ ಮಾಡಲಾಗಿದೆ ಎಂದರು.
ಕಳೆದ ನವ್ಹೆಂಬರ್ 1ರಿಂದ ಕಲಬುರಗಿ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಗುರಿ ಹೊಂದಲಾಗಿ ದೃಢ ಹೆಜ್ಜೆ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶ ಕುಮಾರ ಇದೇ ಸಂದರ್ಭದಲ್ಲಿ ತಿಳಿಸಿದರು