Advertisement

ಸ್ವಾತಂತ್ರ್ಯ ದಿನಾಚರಣೆ ಸಜ್ಜುಗೊಂಡಿದೆ ಉಡುಪಿ ಜಿಲ್ಲೆ

02:24 AM Aug 15, 2019 | sudhir |

ಉಡುಪಿ: 73ನೇ ಸ್ವಾತಂತ್ರ್ಯೋತ್ಸವಕ್ಕೆ ಉಡುಪಿ ಜಿಲ್ಲೆ ಸಜ್ಜಾಗಿದೆ. ಈಗಾಗಲೇ ಉಡುಪಿ ಬೀಡಿನಗುಡ್ಡೆಯಲ್ಲಿರುವ ಗಾಂಧೀ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ದಿನಗಳಿಂದ ಪೂರ್ವ ಸಿದ್ಧತೆಗಳು ನಡೆಯುತ್ತಿದೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಧ್ವಜಾರೋಹಣ ನಡೆಸಲಿದ್ದಾರೆ.

Advertisement

ಮೊದಲು ಜಿಲ್ಲಾ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಅನಂತರ ಅಜ್ಜರಕಾಡಿನಲ್ಲಿರುವ ಹುತ್ಮಾತ್ಮರ ಸ್ಮಾರಕದ ಬಳಿ ಧ್ವಜಾರೋಹಣಗೊಂಡ ಬಳಿಕ ಜಿಲ್ಲಾಧಿಕಾರಿಗಳು ಬೀಡಿನಗುಡ್ಡೆಗೆ ಆಗಮಿಸಿ ಧ್ವಜಾರೋಹಣ ಮಾಡಿ ಜಿಲ್ಲೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದು, ಪೊಲೀಸ್‌ ಪಡೆ, ಗೃಹರಕ್ಷಕ ಪಡೆ, ಸ್ಕೌಡ್ಸ್‌ ಗೈಡ್ಸ್‌, ಎನ್‌ಸಿಸಿ ಸೇರಿದಂತೆ ಒಟ್ಟು 28 ತಂಡಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ. ಇನ್ನು ಎಸ್‌.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಿ, ಸಮ್ಮಾನಿಸಲಾಗುವುದು.

ನೆರೆ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಲಾಗುತ್ತದೆ. ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಕಡಿಮೆಗೊಳಿಸಲಾಗಿದೆ.

ಜಿಲ್ಲಾ ಎಸ್ಪಿ ನಿಶಾ ಜೇಮ್ಸ್‌ ಖುದ್ದು ಸ್ಥಳದಲ್ಲಿ ಇದ್ದು, ಎಲ್ಲ ಕೆಲಸ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next