Advertisement
ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಅಮೃತಮಹೋತ್ಸವ ಕಾರ್ಯಕ್ರಮದ ಪರಿಶೀಲನಾ ಸಭೆ ನಡೆಸಲಾಗಿದ್ದು, ನಾಡಿನ ಸಾಂಸ್ಕ್ರತಿಕ ಇತಿಹಾಸದಲ್ಲೇ ವಿನೂತನವಾದ ರೀತಿಯಲ್ಲಿ ರಥಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಅಮೃತ ಭಾರತಿಗೆ ಕನ್ನಡದ ಆರತಿ ” ಎಂಬ ಶೀರ್ಷಿಕೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸ್ವಾತಂತ್ರ್ಯದ ಹಬ್ಬ ನಡೆಯಲಿದೆ.
Related Articles
Advertisement
ರಥಯಾತ್ರೆ
ಮೂರನೇ ಹಂತದಲ್ಲಿ ಆಗಷ್ಟ್ 1 ರಿಂದ ಆಗಷ್ಟ್ 8 ರ ವರೆಗೆ ರಾಜ್ಯದ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಎಂಬ ಶೀರ್ಷಿಕೆಯಲ್ಲಿ ಆರು ಸ್ವಾತಂತ್ರ್ಯ ಅಮೃತ ಮಹೋತ್ಸವದ ರಥಯಾತ್ರೆ ನಡೆಸಲಾಗುತ್ತದೆ. ರಾಜ್ಯದ 31 ಜಿಲ್ಲೆಗಳನ್ನು ಹಾದು ಈ ರಥಯಾತ್ರೆ ಬೆಂಗಳೂರಿಗೆ ತಲುಪಲಿದೆ.
ರಥಯಾತ್ರೆ ಸಾಗಬೇಕಾದ ಮಾರ್ಗಗಳ ರೂಟ್ ಮ್ಯಾಪ್ ನ್ನು ಕರಾರುವಕ್ಜಾಗಿ ಸಿದ್ದಪಡಿಸಲಾಗುತ್ತಿದ್ದು, ಜಿಲ್ಲಾವಾರು ಕಾಲೇಜು ವಿದ್ಯಾರ್ಥಿಗಳು, ಯುವಕ ಸಂಘ, ಕಲಾ ತಂಡಗಳನ್ನು ಬಳಸಿಕೊಂಡು ಮೆರವಣಿಗೆ ನಡೆಸಲಾಗುತ್ತದೆ.ಬರಬೇಕು. ವಿವಿಧ ರಂಗಾಯಣದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಪಟ್ಟ ನಾಟಕಗಳನ್ನು ಆಯಾ ಜಿಲ್ಲಾವಾರು ರಚನೆ ಮಾಡಲು ಸೂಚನೆ ನೀಡಲಾಗಿದೆ.
ಸಮಾರೋಪಆಗಷ್ಟ್ 9, 10, 11 ರಂದು ಅಮೃತ ಮಹೋತ್ಸವದ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ. ಜಿಲ್ಲೆಗಳಿಂದ ಹೊರಟ ರಥಯಾತ್ರೆ ಆಗಷ್ಟ್ 9 ರಂದು ಬೆಂಗಳೂರು ತಲುಪಲಿದೆ. ರಾಜಧಾನಿಯಲ್ಲಿ ಭಾರಿ ಮೆರವಣಿಗೆ, ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯುತ್ತದೆ. ಆಗಷ್ಟ್ 10 ರಂದು ಇಡಿ ದೇಶದಲ್ಲಿ ಎಲ್ಲರ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ವಿನೂತನ ಚಿಂತನೆ ನಡೆಸಲಾಗಿದ್ದು, ಸಾಕಷ್ಟು ಪೂರ್ವ ತಯಾರಿ ಮಾಡಬೇಕು. ಪೂರ್ವ ತಯಾರಿ ಸಭೆಯನ್ನು ಮೇ 10 ರ ಒಳಗೆ ಮುಗಿಸಬೇಕು ಎಂದು ಸಚಿವ ಸುನೀಲ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಸ್ವಾತಂತ್ರ್ಯ ದ ಅಮೃತ ಮಹೋತ್ಸ ದೇಶಾದ್ಯಂತ ನಡೆಯುತ್ತದೆ. ಆದರೆ ಕರ್ನಾಟಕದಲ್ಲಿ ಮಾತ್ರ ಇದು ವಿಭಿನ್ನವಾಗಿರಬೇಕು. ಅಮೃತ ಭಾರತಿಗೆ ಕನ್ನಡದ ಆರತಿ ನಡೆಸುವಾಗ ಕಿಂಚಿತ್ ಲೋಪವುಂಟಾಗಬಾರದು. ಇದು ದೇಶದ ಉತ್ಸವ, ರಾಜ್ಯದ ಉತ್ಸವವಾಗಿದ್ದು ಕನ್ನಡಿಗರು ಹೆಮ್ಮೆಪಡುವ ರೀತಿಯಲ್ಲಿ ನಡೆಸಲಾಗುವುದು.
ವಿ.ಸುನೀಲ್ ಕುಮಾರ್, ಕನ್ನಡ ಸಂಸ್ಕೃತಿ ಹಾಗೂ ಇಂಧನ ಸಚಿವ