Advertisement

ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ರಿಂದ ಧ್ವಜಾರೋಹಣ

10:23 AM Aug 15, 2019 | keerthan |

ಬಳ್ಳಾರಿ: ಗಣಿ ನಾಡು ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 73 ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

Advertisement

ಪೊಲೀಸ್, ಗೃಹ ರಕ್ಷಕದಳ, ಎನ್,ಸಿ,ಸಿ ಸಶಸ್ತ್ರ ಮೀಸಲು ಪಡೆ, ಶಾಲಾ ಕಾಲೇಜು ವಿದ್ಯಾರ್ಥಿಗಳ 44 ತುಕಡಿಗಳಿಂದ ಪರೇಡ್ ವಂದನೆ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸಿದರು ದೇಶದ ಸಮಗ್ರತೆಗಾಗಿ ನಾವೆಲ್ಲ ಬದ್ಧರಾಗಿರಬೇಕೆಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ಆಕರ್ಷಕ ಕವಾಯತ್ ನಡೆಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ ಉತ್ತಮ ಸಾಧನೆ ಮಾಡಿದ ಹಲವರಿಗೆ ಸನ್ಮಾನ, ಆನಂತರ ಮೈದಾನದಲ್ಲಿ ನೂರಾರು ಶಾಲಾ ಮಕ್ಕಳಿಂದ ದೇಶ ಭಕ್ತಿಗೀತೆಗಳ ಗಾಯನದ ನೃತ್ಯ ಪ್ರದರ್ಶನ ಆಕರ್ಷಕವಾಗಿ ನಡೆಯಿತು.

ಸಮಾರಂಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ, ಡಾ.ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ನಗರ ಶಾಸಕ ಗಾಲಿ, ಸೋಮಶೇಖರ ರೆಡ್ಡಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷೆ ದೀನಾ ಮಂಜುನಾಥ, ಸಿಈಓ ನಿತೀಶ್ ಕೆ, ಎಸ್ಪಿ ಸಿ.ಕೆ.ಬಾಬಾ ಮೊದಲಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next