Advertisement

ಕೋವಿಡ್ ಮಧ್ಯೆ ಮಂಗಳೂರಿನಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

02:08 PM Aug 15, 2020 | keerthan |

ಮಂಗಳೂರು: 74ನೇ ಸ್ವಾತಂತ್ರ್ಯ ದಿನದ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಧ್ವಜಾರೋಹಣ ನೆರವೇರಿಸಿದರು.

Advertisement

ಕೋವಿಡ್-19 ಸೋಂಕು ಭೀತಿಯ ಕಾರಣ ಸರಳ ಕಾರ್ಯಕ್ರಮ ನಡೆಸಲಾಯಿತು. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ, ನಗರ ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಜನಪ್ರತಿನಿಧಿಗಳು ಭಾಗಿಯಾಗಿದ್ದರು.

ಕೋವಿಡ್ ಕಾರಣಕ್ಕೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಸಾರ್ವಜನಿಕರಿಗಾಗಿ ಜಿಲ್ಲಾಡಳಿದ ಅಧಿಕೃತ ಯೂಟ್ಯೂಬ್ ಚಾನೆಲ್ ಮೂಲಕ ಸ್ವಾತಂತ್ರ್ಯ ದಿನಾಚರಣೆ ನೇರಪ್ರಸಾರ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next