ಕಲಬುರಗಿ: ನಗರದ ಶರಣಬಸವ ವಿಶ್ವವಿ ದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಜಾದಿ ಕಾ ಅಮೃತ ಮಹೋತ್ಸವವನ್ನು ಸಾಂಪ್ರದಾಯಿಕ ಸಂಭ್ರಮದಿಂದ ಆಚರಿಸಲಾಯಿತು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವಾಜಿ ಮತ್ತು 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸುಮಾರು 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳು ಭಾಗವಹಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಮೈದಾನದಲ್ಲಿ ನೆರೆದಿದ್ದ ಪ್ರತಿಯೊಬ್ಬರಿಗೂ ಇದು ವಿಶೇಷ ಸಂದರ್ಭವಾಗಿತ್ತು ಮತ್ತು ಪ್ರಥಮ ಬಾರಿಗೆ ಸಂಸ್ಥಾನದ 9ನೇ ಪೀಠಾ ಧಿಪತಿ ಚಿರಂಜೀವಿ ಪೂಜ್ಯ ದೊಡ್ಡಪ್ಪ ಅಪ್ಪ ಅವರು ತಮ್ಮ ತಾಯಿ ಮತ್ತು ಸಂಘದ ಚೇರಪರ್ಸನ್ ಡಾ| ದಾಕ್ಷಾಯಿಣಿ ಅವ್ವಾಜಿ ಮತ್ತು ಸಹೋದರಿಯರಾದ ಶಿವಾನಿ ಎಸ್ ಅಪ್ಪಾ, ಭವಾನಿ ಎಸ್ ಅಪ್ಪಾ ಮತ್ತು ಮಹೇಶ್ವರಿ ಎಸ್ ಅಪ್ಪಾ ಅವರ ಉಪಸ್ಥಿತಿಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದರು.
ವಿಶ್ವವಿದ್ಯಾ ಲಯದ ಉಪಕುಲಪತಿ ಡಾ|ನಿರಂಜನ್ ವಿ ನಿಷ್ಠಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸೇರಿದಂತೆ ಪ್ರಮುಖರು ಈ ಐತಿಹಾಸಿಕ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾತೋಶ್ರೀ ಡಾ|ದಾಕ್ಷಾಯಿಣಿ ಅವ್ವಾಜಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ವಲ್ಲಭಭಾಯಿ ಪಟೇಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಮಾಡಿದ ತ್ಯಾಗವನ್ನು ಸ್ಮರಿಸಿದರು. 200 ವರ್ಷಗಳಿಗೂ ಹೆಚ್ಚು ಕಾಲ ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದರೂ, ಭಾರತ ದೇಶವು ಇಡೀ ವಿಶ್ವದಲ್ಲಿ ಆರ್ಥಿಕವಾಗಿ ಸದೃಢವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.
ಡಾ| ಅವ್ವಾಜಿ ಮಾತನಾಡಿ, ದೇಶದ ಗಡಿಯನ್ನು ರಕ್ಷಿಸುವಲ್ಲಿ ಭಾರತೀಯ ಸಶಸ್ತ್ಯ ಪಡೆಗಳ ಯೋಧರು ಮಾಡಿದ ತ್ಯಾಗವನ್ನು ದೇಶವು ಶ್ರೇಷ್ಠತೆಯಿಂದ ಸ್ಮರಿಸುತ್ತದೆ ಮತ್ತು ಗಡಿಯಲ್ಲಿ ಶಾಂತಿ ಕಾಪಾಡಲು ಭಾರತ ಸಾಧಿಸಿದ ಪ್ರಗತಿಗೆ ಪ್ರತಿಕೂಲವಾದ ಪ್ರಯತ್ನಗಳನ್ನು ಸ್ಮರಿಸುತ್ತದೆ ಎಂದರು.
ಇದಕ್ಕೂ ಮುನ್ನ ಶರಣಬಸವ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ|ನಿರಂಜನ್ ವಿ ನಿಷ್ಠಿ ಅವರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಉಪಕುಲಪತಿ ಪ್ರೊ| ವಿ.ಡಿ.ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ|ಬಸವರಾಜ ಮಠಪತಿ, ಡೀನ್ ಡಾ| ಲಕ್ಷ್ಮೀ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಪ್ರೊ| ಕಿರಣ ಮಾಕಾ, ವಿವಿಯ ಎಲ್ಲ ವಿಭಾಗಗಳ ಡೀನ್‌ಗಳು, ಅಧ್ಯಕ್ಷರು ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು. ಶರಣಬಸವೇಶ್ವರ ರೆಸಿಡೆನ್ಶಿಯಲ್ ಪಬ್ಲಿಕ್ ಸ್ಕೂಲ್ ಮತ್ತು ಪಪೂ ಕಾಲೇಜಿನ ಪ್ರಾಂಶುಪಾಲ ಹಾಗೂ ವಿವಿಯ ಸಮಕುಲಪತಿಗಳಾದ ಎನ್.ಎಸ್. ದೇವರಕಲ್ ಉಪಸ್ಥಿತರಿದ್ದರು.