Advertisement

Independence day: ಲಾಲ್ ಬಾಗ್‌ನಲ್ಲಿ 216ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

06:55 PM Aug 08, 2024 | Team Udayavani |

ಬೆಂಗಳೂರು:  ತೋಟಗಾರಿಕೆ ಇಲಾಖೆಯು ಲಾಲ್ ಬಾಗ್ ನ ಗಾಜಿನ ಮನೆಯ ಸಸ್ಯ ತೋಟದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ  ಆಯೋಜಿಸಿದ್ದ “ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್” ವಿಷಯಾಧಾರಿತ 216ನೇ ಫಲಪುಷ್ಪ ಪ್ರದರ್ಶನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿ ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಆ. 8 ರಿಂದ 19 ವರೆಗೆ ಏರ್ಪಡಿಸಲಾಗಿದೆ.

ಬಾಬಾ ಸಾಹೇಬ್ ಅಂಬೇಡ್ಕರ್‌ರ ಜೀವನ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಆಧರಿಸಿದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದರು.

ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳ ಅರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ ಎಂದರು.

Advertisement

ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳ ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದು ಎಂದರು.

30 ಲಕ್ಷ ಹೂವುಗಳ ಬಳಕೆ:
ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳ ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next