Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿ ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಆ. 8 ರಿಂದ 19 ವರೆಗೆ ಏರ್ಪಡಿಸಲಾಗಿದೆ.
Related Articles
Advertisement
ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳ ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದು ಎಂದರು.
30 ಲಕ್ಷ ಹೂವುಗಳ ಬಳಕೆ:ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳ ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.