Advertisement

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ

01:31 PM Jul 07, 2022 | Team Udayavani |

ಬೆಂಗಳೂರು: ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಈಗ ಕುತೂಹಲಕ್ಕೆ ಕಾರಣವಾಗಿದೆ.

Advertisement

ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಆ.15ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಕಾಂಗ್ರೆಸ್‌ ನಾಯಕರು ಮತ್ತು 75 ಸಾವಿರದಿಂದ ಒಂದು ಲಕ್ಷ ಕಾರ್ಯಕರ್ತರು ಬೆಂಗಳೂರಲ್ಲಿ ಮೆರವಣಿಗೆ ಮಾಡಲಿದ್ದಾರೆ ಎಂದರು.

ಇದರ ಜತೆಗೆ 75 ಕಿ.ಮೀ.ಪಾದಯಾತ್ರೆ ಮಾಡಲು ಹೇಳಿದ್ದಾರೆ. ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ಗುರುವಾರ ಸಭೆ ಕರೆಯಲಾಗಿದೆ. ಪಕ್ಷದ ಹೈಕಮಾಂಡ್‌ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

ಕಾಂಗ್ರೆಸ್‌ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‌ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ ಎಂದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next