Advertisement

ಜಮ್ಮು-ಕಾಶ್ಮೀರ; 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕಾಗಿ ಡ್ರೆಸ್ ರಿಹರ್ಸಲ್

12:45 PM Aug 15, 2019 | Nagendra Trasi |

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ರದ್ದುಗೊಳಿಸಿದ ಬಳಿಕ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಶೇರ್ ಎ ಕಾಶ್ಮೀರ್ ಸ್ಟೇಡಿಯಂನಲ್ಲಿ ಪೂರ್ಣ ಪ್ರಮಾಣದ ಡ್ರೆಸ್ ತಾಲೀಮು ನಡೆಯುತ್ತಿದೆ.

Advertisement

ಶ್ರೀನಗರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಅರೆಸೇನಾಪಡೆ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಆಚರಿಸಲು ರಿಹಸರ್ಲ್ ನಡೆಸುತ್ತಿದೆ. ಜೊತೆಗೆ ಜಮ್ಮು ಕಾಶ್ಮೀರದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ತಾಲೀಮು ನಡೆಯುತ್ತಿದೆ ಎಂದು ಎಎನ್ ಯ ವರದಿ ಮಾಡಿದೆ.

ಕಣಿವೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಸ್ವಾತಂತ್ರ್ಯೋತ್ಸವದ ಆಚರಣೆಗಾಗಿ ರಿಹರ್ಸಲ್ ನಡೆಸಲಾಗುತ್ತಿದೆ. ಅಲ್ಲದೇ ಶಾಂತಿಯುತವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಮ್ಮು-ಕಾಶ್ಮೀರದ ಸರಕಾರದ ವಕ್ತಾರ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ.

Advertisement

ಜಮ್ಮು-ಕಾಶ್ಮೀರದಲ್ಲಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ, ವಿದ್ಯುತ್, ನೀರು ಸರಬರಾಜು ಅಭಾದಿತವಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next