Advertisement

ತಾಲೂಕು ಸಂಪೂರ್ಣ ಕಾರ್ಯಾರಂಭಿಸಲು ವಿವಿಧ ಇಲಾಖೆ ಅಗತ್ಯ 

08:34 PM Aug 15, 2021 | Team Udayavani |

ಹೆಬ್ರಿ: ನೂತನವಾದ ಹೆಬ್ರಿ ತಾಲೂಕು ಸಂಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ವಿವಿಧ ಇಲಾಖೆಗಳ ಆವಶ್ಯಕತೆ ಇದ್ದು ಈ ಬಗ್ಗೆ ಈಗಾಗಲೇ ಹೆಬ್ರಿ ಸುತ್ತಮುತ್ತಲಿನ ಸರಕಾರಿ ಜಾಗಗಳನ್ನು ಗುರುತಿಸಿ ವಿವಿಧ ಇಲಾಖೆಗಳ ಕಟ್ಟಡ ನಿರ್ಮಾಣಕ್ಕೆ ನೀಲಿ ನಕಾಶೆಯನ್ನು ತಯಾರಿಸಲಾಗಿದೆ ಎಂದು ಹೆಬ್ರಿ ತಹಶೀಲ್ದಾರ್‌ ಪುರಂದರ್‌ ಕೆ. ಹೇಳಿದರು.

Advertisement

ಅವರು ಹೆಬ್ರಿ ತಾಲೂಕು ಆಡಳಿತ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಭಟ್‌ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಹೆಬ್ರಿ ತಾಲೂಕಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುಸ್ತಕ ನೀಡಿ ಗೌರವಿಸಲಾಯಿತು.

ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಸೇರಿದಂತೆ ಸುಮಾರು 17 ಜನ ಹಿರಿಯ, ಕಿರಿಯ ಸಾಹಿತಿಗಳನ್ನು ಹಾಗೂ ವಿವಿಧ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಸಮಾರಂಭದಲ್ಲಿ ಹೆಬ್ರಿ ಗ್ರಾ.ಪಂ. ಅಧ್ಯಕ್ಷೆ ಮಾಲತಿ, ಹೆಬ್ರಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಶಿಧರ್‌ ಕೆ.ಜಿ., ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರಸಾದ್‌ ರಾವ್‌ ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸೀತಾನದಿ ವಿಟಲ್‌ ಶೆಟ್ಟಿ ಸ್ವಾಗತಿಸಿ, ಶಿಕ್ಷಕ ಪ್ರಕಾಶ್‌ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಉಪನ್ಯಾಸಕ ಡಾ| ಗಣಪತಿ ಎಚ್‌ .ಎ. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next