Advertisement

 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

02:25 PM Jul 30, 2022 | Team Udayavani |

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಲತಾ ಸೂಚಿಸಿದರು.

Advertisement

ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ನಡೆಯಲಿರುವ ಪಟ್ಟಣದ ಪದವಿ ಪೂರ್ವ ಕಾಲೇಜು ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು ಎಂದು ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.

ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಲಘು ಉಪಾಹಾರ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಪೊಲೀಸ್‌ ತುಕಡಿಗಳಿಂದ ಕವಾಯತು: ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ನ್ನು ಸನ್ಮಾನಿಸಲಾಗುವುದು. ಕೋವಿಡ್‌ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಅಗತ್ಯ ಪೊಲೀಸ್‌ ಬಂದೋಬಸ್ತ್ ಮಾಡುವಂತೆ ಹಾಗೂ ಪೊಲೀಸ್‌ ತುಕಡಿಗಳಿಂದ ಕವಾಯತು ನಡೆಸುವಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲಾ ಅಧಿಕಾರಿಗಳ ಹಾಜರಾತಿ ಕಡ್ಡಾಯ: ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಅಭಿವೃದ್ಧಿಯ ಕುರಿತು ಭಾಷಣ ಮಾಡಲಿದ್ದು, ಎಲ್ಲಾ ಇಲಾಖೆಗಳು ನಿಗದಿತ ದಿನಾಂಕ  ದೊಳಗೆ ತಮ್ಮ ಇಲಾಖೆಯ ಅಭಿವೃದ್ಧಿ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು. ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ದೇವನಹಳ್ಳಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದರು.

Advertisement

ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಭೇಟಿ: ಸರ್ಕಾರದ ಮಾರ್ಗಸೂಚಿಯಂತೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು. ಸಭೆಯ ನಂತರ ಜಿಲ್ಲಾಧಿಕಾರಿ ಆರ್‌.ಲತಾ ಅವರು ದೇವನಹಳ್ಳಿ ಟೌನ್‌ ಕ್ರೀಡಾಂಗಣಕ್ಕೆ ಭೇಟಿ ನೀಡಿಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಅಗತ್ಯವಿರುವ ವೇದಿಕೆ ಹಾಗೂ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಡಾ.ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ನಾಗರಾಜ, ದೊಡ್ಡಬಳ್ಳಾಪುರಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್‌, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ,ತೋಟಗಾರಿಕೆ ಉಪ ನಿರ್ದೇಶಕ ಗುಣವಂತ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಕನ್ನಡಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿನಮ್ರತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ,ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next