Advertisement
ಮಲ್ಲೇಶ್ವರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಸಮ್ಮುಖದಲ್ಲಿ ರಾಜೀವ್ ಚಂದ್ರಶೇಖರ್ ಬಿಜೆಪಿ ಸದಸ್ಯತ್ವ ಪಡೆದರು.ಇದಕ್ಕೂ ಮುನ್ನ ಬಸವನಗುಡಿಯ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿದ್ದ ರಾಜೀವ್ ಚಂದ್ರಶೇಖರ್ ಅವರು ವಿಶೇಷ ಪೂಜೆ ಸಲ್ಲಿಸಿ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಆಗಮಿಸಿದರು. ಯಡಿಯೂರಪ್ಪ, ಜಗದೀಶ ಶೆಟ್ಟರ್ ಮತ್ತಿತರರು ಆತ್ಮೀಯವಾಗಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಪಕ್ಷ ಸೇರ್ಪಡೆ ಪ್ರಕ್ರಿಯೆ ಮುಗಿಸಿದರು. ನಂತರ ಅಲ್ಲೇ ರಾಜ್ಯಸಭೆಗೆ ಸಲ್ಲಿಸಬೇಕಾದ ನಾಮಪತ್ರ ಸಿದಟಛಿಪಡಿಸಲಾಯಿತು. ಯಡಿಯೂರಪ್ಪ ಮತ್ತು ಜಗದೀಶ ಶೆಟ್ಟರ್ ನಾಮಪತ್ರ ಪರಿಶೀಲಿಸಿದ ಬಳಿಕ ಯಡಿಯೂರಪ್ಪ ಅವರ ಕಾರಿನಲ್ಲೇ ರಾಜೀವ್ ಚಂದ್ರಶೇಖರ್ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲು ವಿಧಾನಸೌಧಕ್ಕೆ ತೆರಳಿದರು.
ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಅವರು ಈಗ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಎನ್‌ಡಿಎ ಜತೆ ಮೊದಲಿನಿಂದಲೂ ಅವರು ನಂಟು ಹೊಂದಿದ್ದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಈ ನಂಟು ಮತ್ತಷ್ಟು ಗಟ್ಟಿಯಾಯಿತಲ್ಲದೆ, ಬಿಜೆಪಿ ನೇತೃತ್ವದ ಎನ್‌ಡಿಎ ಅಂಗಪಕ್ಷಗಳ ಕೇರಳ ಘಟಕದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆರ್.ಸಿ. ಆಯ್ಕೆಗೆ ಸಮರ್ಥನೆ
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜೀವ್ ಚಂದ್ರಶೇಖರ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್,ರಾಜೀವ್ ಚಂದ್ರಶೇಖರ್ ಕರ್ನಾಟಕಕ್ಕೆ ಒಳಿತು ಮಾಡುತ್ತಿರುವ ಕನ್ನಡಿಗರು ಎಂದು ಹೇಳಿದ್ದಾರೆ. ಬೆಂಗಳೂರು ರಕ್ಷಿಸಿ ಪಾದಯಾತ್ರೆ ವೇಳೆ ಮಾತನಾಡಿದ ಅವರು, ರಾಜೀವ್ ಚಂದ್ರಶೇಖರ್ ಕನ್ನಡದವರು. ಇಲ್ಲಿನ ಕೆರೆ, ಪರಿಸರ ಉಳಿವಿಗಾಗಿ ಹೋರಾಟ ಮಾಡಿದ್ದಾರೆ. ಕನ್ನಡ ದೃಶ್ಯ ಮಾಧ್ಯಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಹೀಗಿರುವಾಗ ಅವರನ್ನು ಬೇರೆ ರಾಜ್ಯದವರು ಎನ್ನುವುದು ಸರಿಯಲ್ಲ. ಕೇರಳದಿಂದ ಬಂದಿರುವ ಕೆ.ಜೆ.ಜಾರ್ಜ್, ಎನ್.ಎ.ಹ್ಯಾರಿಸ್ ಅವರನ್ನು ನಾವು ಒಪ್ಪಿಕೊಂಡಿಲ್ಲವೇ ಎಂದು ಪ್ರಶ್ನಿಸಿದರು.