Advertisement

ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಇಂಡಿ ಜನರ ಬೆಂಬಲ

05:46 PM May 03, 2022 | Shwetha M |

ಇಂಡಿ: ಬಾಗಲಕೋಟೆ ತಾಲೂಕಿನ ಕೂಡಲಸಂಗಮದ ಕೂಡಲ ಸಂಗಮನಾಥ ದೇವಸ್ಥಾನದ ಆವರಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಇಂಡಿ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು ಸೋಮವಾರ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

Advertisement

ಈ ವೇಳೆ ಪಂಚಮಸಾಲಿ ಸಮಾಜದ ಕೂಡಲಸಂಗಮ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಕಳೆದ 14 ದಿನಗಳಿಂದ ಕೂಡಲ ಸಂಗಮನಾಥನ ಸನ್ನಿಧಿಯಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದೇವೆ. ಸರಕಾರ ಭರವಸೆಗಳ ಮೇಲೆ ಭರವಸೆ ನೀಡುತ್ತಿದೆ. ಆದರೆ 2ಎ ಮೀಸಲಾತಿ ಇದುವರೆಗೂ ನೀಡಿಲ್ಲ. ಮೀಸಲಾತಿ ನೀಡುವವರೆಗೂ ಹೋರಾಟ ನಿಲ್ಲಲ್ಲ. ಮೇ ತಿಂಗಳ 4ರಂದು ಕೂಡಲಸಂಗಮದಲ್ಲಿ ನಡೆಯುತ್ತಿರುವ ಧರಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮೇ 5ರಂದು ರಾಜ್ಯದ ಎಲ್ಲ ತಾಲೂಕು ಕೇಂದ್ರಗಳ ತಹಶೀಲ್ದಾರ್‌ ಕಚೇರಿ ಮುಂದೆ ಸಮಾಜ ಬಾಂಧವರು ಬೆಳಗ್ಗೆ 10ರಿಂದ ಸಾಯಂಕಾಲ 5ರವರೆಗೆ ಧರಣಿ ನಡೆಸಬೇಕು. ತದ ನಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸುವುದು, ಶಾಸಕರ ಮನೆಗಳ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದು ದಿನಾಂಕವನ್ನು ಶೀಘ್ರ ಪ್ರಕಟಿಸಲಿದ್ದೇವೆ ಎಂದರು.

ಧರಣಿಯಲ್ಲಿ ಹುನಗುಂದ ಮಾಜಿ ಶಾಸಕ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ವಿಜಯಪುರ ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಬಿ.ಎಂ. ಪಾಟೀಲ, ಇಂಡಿ ತಾಲೂಕಾಧ್ಯಕ್ಷ ವಿ.ಎಚ್‌. ಬಿರಾದಾರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸೋಮಶೇಖರ ದೇವರ, ಶಿವು ದೇವರ, ಭೀಮನಗೌಡ ಬಿರಾದಾರ, ಯೋಗಪ್ಪಗೌಡ ಬಿರಾದಾರ ಸೇರಿದಂತೆ ನೂರಾರು ಜನ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next