ಮುಂಬೈ: ಭಾರತದ ವಿರುದ್ಧದ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲೂ ಪ್ರವಾಸಿ ನ್ಯೂಜಿಲ್ಯಾಂಡ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 3–0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 147 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ, ಎರಡನೇ ಇನಿಂಗ್ಸ್‌ನಲ್ಲಿ ಕೇವಲ 121 ರನ್ ಗಳಿಸಿ ಆಲ್ ಔಟ್ ಆಗುವ ಮೂಲಕ 25 ರನ್ ಅಂತರದ ಸೋಲೊಪ್ಪಿಕೊಂಡಿತು.
ಸೋಲಿನ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಟ್ಟಿಯಲ್ಲಿಯೂ ಭಾರತ ಸ್ಥಾನ ಕುಸಿತ ಕಂಡುಬಂದಿದ್ದು ದ್ವಿತೀಯ ಸ್ಥಾನ ಪಡೆದುಕೊಂಡು ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೆ ಜಿಗಿದಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಉತ್ತಮ ಪ್ರದರ್ಶನ ನೀಡಲು ಯತ್ನಿಸಿತ್ತು ಆದರೆ ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ದಾಳಿಗೆ ನ್ಯೂಜಿಲೆಂಡ್ 235 ರನ್ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 263 ರನ್ ಪೇರಿಸಿತು. 28 ರನ್‌ಗಳ ಅಲ್ಪ ಮುನ್ನಡೆಯೂ ಪಡೆಯಿತು. ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಕಿವೀಸ್, ಮತ್ತೆ ಜಡೇಜಾ ಅವರ ದಾಳಿಗೆ ನಲುಗಿದ್ದಲ್ಲದೆ, 174 ರನ್ಗಳಿಗೆ ಆಲೌಟ್ ಆಗಿ 147 ರನ್‌ಗಳ ಸಾಧಾರಣ ಗುರಿ ನೀಡಿತು. ಆದರೆ ಭಾರತ ಈ ಅಲ್ಪ ಮೊತ್ತವನ್ನು ಗಳಿಸಲು ವಿಫಲವಾಗಿದೆ.
ಇದನ್ನೂ ಓದಿ: Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ