Advertisement

ಭಾರತದಲ್ಲಿ 200 ಕೋಟಿ ಡೋಸ್ ಲಸಿಕೆ ವಿತರಣೆಗೆ ಪ್ರಧಾನಿ ಮೋದಿ ಅಭಿನಂದನೆ

08:19 PM Jul 20, 2022 | Team Udayavani |

ನವದೆಹಲಿ: ಭಾರತದಲ್ಲೀಗ ಕೋವಿಡ್ ಲಸಿಕೆ ಪಡೆದವರ ಸಂಖ್ಯೆ 200 ಕೋಟಿ ದಾಟಿದೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ಲಸಿಕೆ ತಯಾರಿಕಾ ಕಂಪನಿಗಳು, ಆರೋಗ್ಯ ಸೇವಾ ಸಿಬ್ಬಂದಿ ಹಾಗೂ ಸಹಾಯಕ ಸಿಬ್ಬಂದಿಯ ಪರಿಶ್ರಮವನ್ನು ಶ್ಲಾಘಿಸಿದ್ದಾರೆ.

Advertisement

ಅವರೆಲ್ಲರಿಗೂ ಪತ್ರದ ಮೂಲಕ ಧನ್ಯವಾದ ಅರ್ಪಿಸಿರುವ ಅವರು, “ಜೀವ ಉಳಿಸುವುದು ಮಹತ್ವದ ಕಾರ್ಯ.

ದೇಶದ 200 ಕೋಟಿ ಜನರಿಗೆ ಲಸಿಕೆ ಸಿಗುವಂತೆ ಮಾಡಿದ ಎಲ್ಲರ ಸೇವೆ ಶ್ಲಾಘನೀಯ ಎಂದು ಹೇಳಿದ್ದಾರೆ. ಇವರೆಲ್ಲರೂ ಭಾರತೀಯರನ್ನು ಅಪಾಯದಿಂದ ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next