Advertisement

Budget 2024: ಪ್ರವಾಸೋದ್ಯಮಕ್ಕೆ ಭರ್ಜರಿ ಕೊಡುಗೆ-ಮತ್ಸ್ಯ ಸಂಪದ ಯೋಜನೆ ಘೋಷಣೆ

03:28 PM Feb 01, 2024 | Team Udayavani |

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುರುವಾರ(ಫೆ.01) ಲೋಕಸಭೆಯಲ್ಲಿ ಮಧ್ಯಂತರ ಬಜೆಟ್‌ ಮಂಡಿಸಿದರು. ಇತ್ತೀಚೆಗಷ್ಟೇ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಕಾಣಿಸಿಕೊಂಡಿದ್ದು, ಸಚಿವೆ ನಿರ್ಮಲಾ ಅವರು ಲಕ್ಷದ್ವೀಪದ ಕುರಿತು ಬಜೆಟ್‌ ನಲ್ಲಿ ಪ್ರಸ್ತಾಪಿಸಿದ್ದಾರೆ.

Advertisement

ಇದನ್ನೂ ಓದಿ:166 ಕೋಟಿ ಕೊಟ್ಟು ಖರೀದಿಸಿದ ಮನೆಯಲ್ಲಿ ನೀರು ಸೋರಿಕೆ; ಮನೆ ಖಾಲಿ ಮಾಡಿದ ಪ್ರಿಯಾಂಕ ದಂಪತಿ

ಲಕ್ಷದ್ವೀಪದ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗುವುದು. ಅದೇ ರೀತಿ ದೇಶಾದ್ಯಂತ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ರಾಜ್ಯಗಳಲ್ಲೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗಾಗಿ 75 ಸಾವಿರ ಕೋಟಿ ರೂಪಾಯಿ ಮೀಸಲಿಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ದೇಶದ 60 ಸ್ಥಳಗಳಲ್ಲಿ ಆಯೋಜಿಸಿದ್ದ ಜಿ20 ಶೃಂಗ ಯಶಸ್ವಿಯಾಗಿದ್ದು, ಜಾಗತಿಕ ಮುಖಂಡರ ಗಮನ ಸೆಳೆದಿದೆ. ನಮ್ಮ ಆರ್ಥಿಕತೆಯನ್ನು ಬಲಿಷ್ಠಗೊಳಿಸುವಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಆಕರ್ಷೀಣಿಯಗೊಳಿಸಬೇಕಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಧಾರ್ಮಿಕ ಪ್ರವಾಸೋದ್ಯಮ ಸೇರಿದಂತೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದು ರಾಜ್ಯಗಳಲ್ಲಿಯೂ ಕೂಡಾ ಜಾರಿಯಾಗಬೇಕು. ಇದರಿಂದಾಗಿ ಸ್ಥಳೀಯ ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ಹೆಚ್ಚಿನ ಅವಕಾಶ ದೊರಕಲಿದೆ.

Advertisement

ದೇಶೀಯ ಪ್ರವಾಸೋದ್ಯಮದ ಅಭಿವೃದ್ಧಿ ನಿಟ್ಟಿನಲ್ಲಿ ಬಂದರು ಕನೆಕ್ಟಿವಿಟಿ ಯೋಜನೆಯನ್ನು ಬಜೆಟ್‌ ನಲ್ಲಿ ಘೋಷಿಸಲಾಗಿದೆ. ಲಕ್ಷದ್ವೀಪದಲ್ಲಿಯೂ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಉದ್ಯೋಗ ಸೃಷ್ಟಿಗೂ ಸಹಾಯಕವಾಗಲಿದೆ ಎಂದು ತಿಳಿಸಿದರು.

ಮೀನುಗಾರಿಕೆಗೆ ಒತ್ತು, ಮತ್ಸ್ಯ ಸಂಪದ ಯೋಜನೆ ಘೋಷಣೆ:

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಮಂಡಿಸಿದ್ದ ಮಧ್ಯಂತರ ಬಜೆಟ್‌ ನಲ್ಲಿ ಮೀನುಗಾರಿಕೆಗೆ 2,248.77 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಘೋಷಿಸಿದ್ದಾರೆ. 2022-23ನೇ ಸಾಲಿನಲ್ಲಿ 1,624.18 ಕೋಟಿ ರೂಪಾಯಿ ಘೋಷಿಸಲಾಗಿತ್ತು. ಇದರೊಂದಿಗೆ ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನ್‌ ಮಂತ್ರಿ ಮತ್ಸ್ಯ ಸಂಪದ ಯೋಜನೆ(ಪಿಎಂ ಎಂಕೆಎಸ್‌ ಎಸ್‌ ವೈ)ಯನ್ನು ಬಜೆಟ್‌ ನಲ್ಲಿ ಘೋಷಿಸಲಾಗಿದೆ. ಈ ಯೋಜನೆಯಡಿ 6,000 ಕೋಟಿ ರೂಪಾಯಿಯಷ್ಟು ಹೂಡಿಕೆ ಮಾಡುವ ಗುರಿ ಹೊಂದಿದೆ. ಮುಂದಿನ ಐದು ವರ್ಷಗಳಲ್ಲಿ ಪಂಚಾಯತ್‌ ಮಟ್ಟದಲ್ಲಿ ಬಹುಉದ್ದೇಶಿತ ಕೋ ಆಪರೇಟಿವ್‌ ಸೊಸೈಟಿಗಳು, ಪ್ರಾಥಮಿಕ ಮೀನುಗಾರರ ಸಂಘ, ಡೈರಿ ಕೋ ಆಪರೇಟಿವ್‌ ಸೊಸೈಟಿಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್‌ ನಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next